ಈ ಕುರಿತು ಹೇಳಿಕೆ ನೀಡಿರುವ ಅವರು,‘ರಾಜ್ಯದ ಶೇ 68ರಿಂದ 70ರಷ್ಟು ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮಗಳಿಂದ ಶೇ70ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಸೇರಿದಂತೆ ಅನೇಕರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಯ ಧೋರಣೆ ಖಂಡಿಸಿ ಮುಷ್ಕರ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.