ಯಾದಗಿರಿ: ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು. ದಿನಾಚರಣೆಯ ದೃಶ್ಯಾವಳಿಗಳನ್ನು ಆನ್ಲೈನ್ ಮೂಲಕ ಸಾರ್ವಜನಿಕರು ಮನೆಗಳಲ್ಲಿಯೇ ಕುಳಿತು ನೋಡುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹೇಳಿದರು.

ಜಿಲ್ಲಾ ಪಂಚಾಯಿತಿಸಭಾಂಗಣದಲ್ಲಿ ಹಮ್ಮಿಕೊಂಡಿದ್ದಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಆಗಸ್ಟ್ 15 ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಧ್ವಜಾರೋಹಣ ನೆರವೇರಿಸುವರು. ಧ್ವಜಾರೋಹಣದ ಪರೇಡ್ನಲ್ಲಿ ಸುಮಾರು 6 ರಿಂದ 8 ತಂಡಗಳಿಗೆ ಅವಕಾಶ ಮಾಡಿಕೊಡಲಾಗುವುದು.ಅಂದು ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದರು.

ಈ ಬಾರಿ ಸಾರ್ವಜನಿಕರು ಮತ್ತು ಮಕ್ಕಳು ಭಾಗವಹಿಸುವುದನ್ನು ನಿರ್ಬಂಧಿಸಲಾಗಿದೆ. ಕಾರ್ಯಕ್ರಮಕ್ಕೆ ಹಾಜರಾಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅವರನ್ನು ಸ್ಕ್ರೀನಿಂಗ್ಗೆ ಒಳಪಡಿಸಲಾಗುವುದು, ಪರಸ್ಪರ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. 30 ಜನ ಕೋವಿಡ್ ವಾರಿಯರ್ಸ್ಗಳನ್ನು ಸನ್ಮಾನಿಸಲಾಗುವುದು. ಕೋವಿಡ್-19 ದಿಂದ ಗುಣಮುಖರಾದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,ಪ್ರಭಾರಿ ಹೆಚ್ಚುವರಿಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಪ್ರೊಬೇಷನರಿ ಐಎಎಸ್ ಅಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಂಘ–ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.