ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸ್ವಾತಂತ್ರ್ಯ ಸಮರ ಕರುನಾಡು ಅಮರ’ ನಾಟಕ ಪ್ರದರ್ಶನ

Last Updated 17 ಸೆಪ್ಟೆಂಬರ್ 2021, 2:36 IST
ಅಕ್ಷರ ಗಾತ್ರ

ಯಾದಗಿರಿ: ಭಾರತ ಸ್ವಾತಂತ್ರ್ಯ ಹೋರಾಟದ ಕುರಿತು ರಂಗವಿಜಯ ತಂಡ ಅಭಿನಯದ ‘ಸ್ವಾತಂತ್ರ್ಯ ಸಮರ ಕರುನಾಡು ಅಮರ’ ನಾಟಕ ಪ್ರರ್ದಶನ ಈಚೆಗೆ ನಗರದ ಹಿಂದಿ ಪ್ರಚಾರ ಸಭಾಂಗಣದಲ್ಲಿ ನಡೆಯಿತು.

ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ನಗರಸಭೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಕಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಇಂತಹ ನಾಟಕ ಪ್ರರ್ದಶನ ಶ್ಲಾಘನೀಯ. ಸ್ವಾತಂತ್ರ್ಯದ ಚರಿತ್ರೆ ಈಗಿನ ತಲೆ ಮಾರಿಗೆ ತಿಳಿಯಲು ಇದು ಸಹಕಾರಿಯಾಗಲಿದೆ’ ಎಂದು ಹೇಳಿದರು.

ಈ ವಳೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಚನ್ನಬಸವ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ, ನಗರಸಭೆ ಆಯುಕ್ತ ಬಿ.ಟಿ. ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಹಳ್ಳಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಮಹಿಪಾಲ ರೆಡ್ಡಿ, ಎ. ವೇಣುಗೋಪಾಲ, ಅನಿಲ ಗುರೂಜಿ, ನಾಗೇಶ್ ಕುಮಾರ, ವೈಜನಾಥ ಹಿರೇಮಠ, ಪಲ್ಲವಿ ಮಣಿ ಇದ್ದರು.

ರಂಗವಿಜಯ ನಾಟಕ ತಂಡದ ನಿರ್ದೇಶಕ ಮಾಲೂರು ವಿಜಿ ಅವರು ನಾಟಕದ ಕುರಿತು ವಿವರ ನೀಡಿದರು. ಬಳಿಕ ಸ್ವಾತಂತ್ರ್ಯ ಸಮರ ಕರುನಾಡ ಅಮರ ನಾಟಕ ಪ್ರದರ್ಶನಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT