ಯಾದಗಿರಿ: ದೇಶದಲ್ಲಿ ಆರ್ಥಿಕ ಸಮಸ್ಯೆಯ ಬಿರುಗಾಳಿ ಉಲ್ಬಣಿಸುತ್ತಿದ್ದು, ರೈತರು, ಕಾರ್ಮಿಕರು, ವ್ಯಾಪಾರಿಗಳು ಕಣ್ಣೀರು ಸುರಿಸುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಭೀಮಣ್ಣ ಮೇಟಿ ಆರೋಪಿಸಿದ್ದಾರೆ.

ದೇಶ ಭಾರಿ ಸಂಕಷ್ಟದಲ್ಲಿ ಇದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರವಾಗಿ ಪರಿಗಣಿಸದಿರುವುದು ನಿಜಕ್ಕೂ ಮಾರಕವಾದ ಬೆಳವಣಿಗೆಯಾಗಿದೆ. ಬಡ ಹಾಗೂ ಮಧ್ಯಮ ವರ್ಗದವರು ಜೀವನ ನಡೆಸಲು ಆಗುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕ ಗಗನಕ್ಕೇರುತ್ತಿವೆ. ಇನ್ನೂ ಇಂಧನ ಬೆಲೆಯಂತೂ ಹೇಳುವಂತಹ ಪರಿಸ್ಥಿತಿಯಿಲ್ಲ. ಇದರ ಕಡೆಗೆ ಗಮನ ಹರಿಸುವ ಮೂಲಕ ಬೆಲೆ ನಿಯಂತ್ರಣ ಮಾಡಬೇಕಾದ ನರೇಂದ್ರ ಮೋದಿ ಅವರು ದೂರು ಉಳಿದುಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ದೇಶದ ಜನರು ಸಂಕಷ್ಟದಲ್ಲಿ ಇದ್ದಾರೆ. ಆದರೆ ಪ್ರಧಾನಿ ಮಾತ್ರ ಇದಕ್ಕೂ ತಮಗೂ ಯಾವುದೇ ಸಂಬಂಧ ಇಲ್ಲ ಎಂಬಂತೆ ವರ್ತನೆ ಮಾಡುತ್ತಿರುವುದು ಜನರಲ್ಲಿ ಆಕ್ರೋಶ ಮೂಡಿಸಿದೆ. ಯುವ ಜನತೆ ಉದ್ಯೋಗ ಕೇಳಿದ್ರೆ ಗೃಹ ಸಚಿವರು ಯುವ ಜನತೆಗೆ ಪಕೋಡಾ ಮಾರಾಟ ಮಾಡಿ ಜೀವನ ಮಾಡಬೇಕು ಎನ್ನುತ್ತಾರೆ. ದೇಶ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ತಿಳಿಯದಂತಗಾಗಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-30-503116127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.