ನಾರಾಯಣಪುರ: ವಿಜಯಪುರದ ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಬುಧವಾರ 20 ಸಾವಿರ ಕ್ಯುಸೆಕ್ ಒಳಹರಿವು ಇದೆ. ಇದನ್ನು ಹಂತಹಂತವಾಗಿ 75 ಸಾವಿರ ಕ್ಯುಸೆಕ್‌ವರೆಗೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಕಳೆದ ಹಲವುದಿನಗಳಿಂದ ಮಹಾರಾಷ್ಟ್ರದ ಕೃಷ್ಣಾ ನದಿ ಉಗಮ ಸ್ಥಾನವಾದ ಮಹಾಬಳೇಶ್ವರದ ಘಟ್ಟ ಪ್ರದೇಶಗಳು ಸೇರಿದಂತೆ ರಾಜ್ಯದ ಕೃಷ್ಣಾ ಹಾಗೂ ಅದರ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಅಣೆಕಟ್ಟು ಅಧಿಕಾರಿಗಳ ಮಾಹಿತಿಯಂತೆ ಬುಧವಾರ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಅಂದಾಜು 1.38 ಲಕ್ಷ ಕ್ಯುಸೆಕ್ ಒಳಹರಿವು ಇದೆ. ಇದರಿಂದ ಜಲಾಶಯದಲ್ಲಿ ನೀರು ಸಂಗ್ರಹ ಹಂತ ಹಂತವಾಗಿ ಏರಿಕೆಯಾಗುತ್ತಿದೆ.
ಎತ್ತರದಲ್ಲಿ 492.25 ಮೀಟರ್ ನೀರು ಸಂಗ್ರಹ ಸಾಮರ್ಥ್ಯದ ನಾರಾಯಣಪುರ ಜಲಾಶಯದಲ್ಲಿ ಬುಧವಾರ 488.34 ಮೀಟರ್ ಸಂಗ್ರಹ ಆಗಿದೆ. ಜಲಾಶಯದ ನೀರಿನ ಸಂಗ್ರಹದಲ್ಲಿ ಗರಿಷ್ಠ 33.31 ಟಿ.ಎಂ.ಸಿ ಅಡಿಗಳಲ್ಲಿ 18.34
ಟಿ.ಎಂ.ಸಿ ಅಡಿ ಸಂಗ್ರಹ ಆಗಿದೆ. ಬಸವಸಾಗರ ಭರ್ತಿಗೆ 4 ಮೀಟರ್ ನೀರಿನ ಅಗತ್ಯ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.