ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋವಿಡ್ ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಿ’

ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ
Last Updated 18 ಜುಲೈ 2020, 16:31 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ. ತಮ್ಮ ಜವಾಬ್ದಾರಿ ಅರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ಕರ್ತವ್ಯ ನಿರ್ವಹಿಸಬೇಕು. ಈ ಕಾರ್ಯದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಜೊತೆಗೆ ಕೋವಿಡ್ ಪೀಡಿತರನ್ನು ಸಮಾಲೋಚನೆ ಮಾಡಬೇಕು. ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ಸಾಂಕ್ರಾಮಿಕ ರೋಗ ಪರಿಣಾಮಕಾರಿ ತಡೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ಹಹಿಸುವ ವೈದ್ಯರು, ಶುಶ್ರೂಷಕಿಯರು, ಪ್ರಯೋಗ ಶಾಲಾ ತಂತ್ರಜ್ಞರು, ಗ್ರೂಪ್ ‘ಡಿ' ಆಸ್ಪತ್ರೆಯ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್ಸ್ ಹಾಗೂ ಇನ್ನಿತರ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.

ಕೊರೊನಾ ವಿರುದ್ಧದ ಸಮರದಲ್ಲಿ ಅಧಿಕಾರಿ, ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಒಬ್ಬರಿಗೊಬ್ಬರು 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಆಗಾಗ ಕೈ ತೊಳೆಯುವುದು ಮತ್ತು ಸ್ಯಾನಿಟೈಜರ್ ಬಳಸುವುದನ್ನು ರೂಢಿಸಿಕೊಳ್ಳಬೇಕು. ಎಲ್ಲರೂ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಇನ್‍ಸ್ಟಾಲ್ ಮಾಡಿಕೊಳ್ಳುವಂತೆ ಸೂಚಿಸಿದರು.

ಪ್ರಭಾರಿ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ನೀಲಮ್ಮ ಎಸ್.ರೆಡ್ಡಿ, ಐಎಂಎ ಜಿಲ್ಲಾ ಕಾರ್ಯದರ್ಶಿ ಡಾ.ವೀರೇಶ ಜಾಕಾ, ಮಕ್ಕಳ ತಜ್ಞ ಡಾ.ಪ್ರಶಾಂತ, ಕೀಲು ಮತ್ತು ಮೂಳೆತಜ್ಞ ಡಾ.ಸುನೀಲ, ಜಿಲ್ಲಾ ಗುಣಮಟ್ಟ ಖಾತ್ರಿ ಸಲಹೆಗಾರ ಡಾ.ಲಕ್ಷ್ಮಿಕಾಂತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT