ಯಾದಗಿರಿ: ಸರ್ಕಾರ ಕಾಲಕಾಲಕ್ಕೆ ಬಿಡುಗಡೆ ಮಾಡುವ ವಿದ್ಯುನ್ಮಾನ ತಂತ್ರಾಂಶದಲ್ಲಿ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಂದ ವಸೂಲಿ ಮಾಡಿದ ವಿವಿಧ ತೆರಿಗೆ ಹಾಗೂ ಸರ್ಕಾರದ ಆಸ್ತಿ ಸಂರಕ್ಷಣೆ ಮಾಡುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿಯ ಸಾಮಾರ್ಥ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಮಂಗಳವಾರ ನಡೆದ ಯಾದಗಿರಿ, ಗುರುಮಠಕಲ್ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಂದ ಅನುಷ್ಠಾನಗೊಳ್ಳುವ ಸರ್ಕಾರದ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಪ್ರತಿ ತಿಂಗಳು ವೇತನ ಪಾವತಿ ಮಾಡಲು ಗ್ರಾಮಗಳಲ್ಲಿ ತೆರಿಗೆ ವಸೂಲಿ ಹಾಗೂ ಇತರೆ ಮೂಲಗಳಿಂದ ಸಂಗ್ರಹಣೆ ಮಾಡಿದ ತೆರಿಗೆಯಿಂದ ಅವರ ವೇತನ ಪಾವತಿ ಮಾಡುವಂತೆ ಸೂಚಿಸಿದ ಅವರು, ಯಾವುದೇ ಕಾರಣಕ್ಕೂ ಸಿಬ್ಬಂದಿ ವೇತನ ಪಾವತಿಗೆ ವಿಳಂಬ ಮಾಡಬಾರದು ಎಂದು ಹೇಳಿದರು.

ಈ ವೇಳೆ ಸಹಾಯಕ ನಿರ್ದೇಶಕ (ಗ್ರಾಉ) ಚಂದ್ರಶೇಖರ ಪವಾರ, ರಾಮಚಂದ್ರ ಬಸೂದೆ, ಸಹಾಯಕ ನಿರ್ದೇಶಕ (ಆಡಳಿತ) ಖಲೀಲ್ ಅಹಮ್ಮದ್, ಮಲ್ಲಣ್ಣ, ನರೇಗಾ ವಿಷಯ ನಿರ್ವಾಹಕ ಅನಸರ್ ಪಟೇಲ್, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸ್ವಚ್ಛ ಭಾರತ ಮಿಷನ್ ಸಂಯೋಜಕ ನಾರಾಯ ಸರ‍್ರಾ ಚಂಡ್ರಕಿ ಹಾಗೂ ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.