ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಅಂಬೇಡ್ಕರ್ ಭಾವಚಿತ್ರ ಎತ್ತಿಟ್ಟ ಘಟನೆಗೆ ಖಂಡನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
Last Updated 28 ಜನವರಿ 2022, 4:25 IST
ಅಕ್ಷರ ಗಾತ್ರ

ಯಾದಗಿರಿ: ರಾಯಚೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಎತ್ತಿಟ್ಟು ಧ್ವಜಾರೋಹಣ ನೆರವೇರಿಸಿದ ಘಟನೆಯನ್ನು ವಿರೋಧಿಸಿ ದಲಿತ ಸಂಘಟನೆಯಿಂದ ನಗರದ ಸುಭಾಷ ವೃತ್ತದಲ್ಲಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಜಿಲ್ಲಾ ಸಮಿತಿಯ ‍ಪದಾಧಿಕಾರಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಗಣರಾಜ್ಯೋತ್ಸವ ಸಮಯದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿದ್ದು, ನ್ಯಾಯಾಧೀಶರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನ್ಯಾಯಾಧೀಶರು ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ದುರ್ವರ್ತನೆ ತೋರಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ರಾಜ್ಯದ ಕೆಲವು ನ್ಯಾಯಾಲಯಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟಿಲ್ಲ. ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಡಲು ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

ನಂತರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

ಸಮಿತಿಯ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ, ಜಿಲ್ಲಾ ಪ್ರಧಾನ ಸಂಚಾಲಕ ಮರಳಸಿದ್ಧ ನಾಯ್ಕಲ್‌, ರಾಮಣ್ಣ ಕಲ್ಲದೇವನಹಳ್ಳಿ, ಅಶೋಕ ನಾಯ್ಕಲ್‌, ಭೀಮರಾಯ ಬಳಿಚಕ್ರ, ನಾಗರಾಜ ನಾಯ್ಕಲ್‌, ನರೇಂದ್ರ ಅನವಾರ, ಚಂದ್ರಕಾಂತ ಚಲುವಾದಿ, ಮಲ್ಲಿನಾಥ ಕಾಗಿ, ಮರಿಲಿಂಗಪ್ಪ ಗುರುಸಣಗಿ, ಶಿವರಾಜ ದೊಡ್ಮನಿ, ರಮೇಶ ಸುಂಗಲಕರ್, ಗೌತಮ ಅರಿಕೇರಿ, ಸೈದಪ್ಪ ಕೊಲ್ಲೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT