ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ: ಜ.1ರಂದು ದೇವಸ್ಥಾನದ ಅಡಿಗಲ್ಲು ಸಮಾರಂಭ

Published 31 ಡಿಸೆಂಬರ್ 2023, 14:11 IST
Last Updated 31 ಡಿಸೆಂಬರ್ 2023, 14:11 IST
ಅಕ್ಷರ ಗಾತ್ರ

ಶಹಾಪುರ: ‘ಜಡೇಶಂಕರಲಿಂಗ ದೇವಸ್ಥಾನದ ಕಟ್ಟಡ ಹಾಗೂ ಸಮುದಾಯ ಭವನ ನಿರ್ಮಾಣದ ಅಡಿಗಲ್ಲು ಸಮಾರಂಭವನ್ನು ಸೋಮವಾರ (ಜ.1) ನಗರದ ಎನ್‌ಜಿಒ ಕಾಲೊನಿಯಲ್ಲಿರುವ ಸಮಾಜದ ನಿವೇಶನದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಿಂಪಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜ ಗಟ್ಟಿನ್ ತಿಳಿಸಿದ್ದಾರೆ.

ಮಾಗಣಗೇರಿ ಬೃಹನ್ಮಠದ ವಿಶ್ವಾರಾಧ್ಯ ಶಿವಾಚಾರ್ಯರು, ನಗರದ ಗುಂಬಳಾಪುರ ಮಠದ ಸಿದ್ದೇಶ್ವರ ಶಿವಾಚಾರ್ಯರು, ಹಿರೇಮಠದ ಸೂಗೂರೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅಡಿಗಲ್ಲು ನೆರವೇರಿಸಲಿದ್ದಾರೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT