ಗುರುವಾರ , ಅಕ್ಟೋಬರ್ 1, 2020
27 °C
ಕೋರ್‌ ಗ್ರೀನ್‌ ಸಕ್ಕರೆ ಕಾರ್ಖಾನೆಯಿಂದ ₹23 ಕೋಟಿ ಬಾಕಿ

‌ಕಬ್ಬಿನ ಬಾಕಿ ಕೊಡಿಸಲು ಆಗ್ರಹಿಸಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ವಡಗೇರಾ ತಾಲ್ಲೂಕಿನ ತುಮಕೂರಿನ ಕೋರ್‌ ಗ್ರೀನ್‌ ಸಕ್ಕರೆ ಕಾರ್ಖಾನೆಯವರು ರೈತರಿಗೆ ₹23 ಕೋಟಿ ಕಬ್ಬಿನ ಬಾಕಿ ನೀಡದೆ ಪರಾರಿಯಾಗಿದ್ದು, ಶೀಘ್ರವೇ ಮಾಲಿಕರನ್ನು ಪತ್ತೆ ಹಚ್ಚಿ ಬಾಕಿ ಹಣ ವಸೂಲಿ ಮಾಡಿ ರೈತರಿಗೆ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಜಾಥಾ ನಡೆಸಿದರು.

ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಅಲ್ಲಿಂದ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು.

ಕಳೆದ 10 ತಿಂಗಳ ಹಿಂದೆಯೇ ಕಬ್ಬು ಪೂರೈಸಿದ ರೈತರಿಗೆ ಬಾಕಿ ಪಾವತಿಸದೇ ದಿನ ದೂಡಿದ್ದಲ್ಲದೇ ಪ್ರತಿಭಟನೆ ಮಾಡಿದರೂ ಕ್ಯಾರೆ ಅನ್ನದೇ ಲಿಖಿತ ರೂಪದಲ್ಲಿ ಒಂದು ತಿಂಗಳಲ್ಲಿ ಬಾಕಿ ಪಾವತಿಸುವುದಾಗಿ ಹೇಳಿದ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕರು, ಆ ಅವಧಿಯೂ ಪೂರ್ಣಗೊಂಡರೂ ಹಣ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣ ಕಾರ್ಖಾನೆ ಮಾಲೀಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ರೈತರಿಗೆ ಬರಬೇಕಾದ ಬಾಕಿ ಪಾವತಿಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.

ಈ ವೇಳೆ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಸನಗೌಡ ಚಿಂಚೋಳಿ, ತಾಲ್ಲೂಕು ಅಧ್ಯಕ್ಷ ಮಂಜುಗೌಡ ತಂಗಡಿಗಿ, ಶಹಾಬಾದ ತಾಲ್ಲೂಕು ಅಧ್ಯಕ್ಷ ಬಸವರಾಜ ಕೋರಿ ಸೇರಿದಂತೆ ಹಲವಾರು ರೈತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು