ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ವಿರುದ್ಧ ಸುರಪುರದಲ್ಲಿ ಜೆಡಿಎಸ್ ಪ್ರತಿಭಟನೆ

Last Updated 25 ಜೂನ್ 2021, 2:06 IST
ಅಕ್ಷರ ಗಾತ್ರ

ಸುರಪುರ: ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಪಕ್ಷದ ಮುಖಂಡರು ಗುರುವಾರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಕ್ಷದ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಮಾತನಾಡಿ, 'ಕೇಂದ್ರ ಸರ್ಕಾರ ಮನಬಂದಂತೆ ಬೆಲೆ ಹೆಚ್ಚಳ ಮಾಡುತ್ತಿದೆ. ವರ್ಷದಲ್ಲಿ ಹತ್ತಾರು ಬಾರಿ ತೈಲ ಉತ್ಪನ್ನಗಳ ಬೆಲೆ ಹೆಚ್ಚಿಸಿದೆ. ಅಡುಗೆ ಅನಿಲ ಬೆಲೆ ಹೆಚ್ಚಿಸಿ ಹೊಡೆತ ಕೊಟ್ಟಿದೆ. ರಸಗೊಬ್ಬರ ಬೆಲೆ ಹೆಚ್ಚಿಸಿ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

'ತೈಲ ಉತ್ಪನ್ನಗಳ ಬೆಲೆ ಹೆಚ್ಚಿಸಿದ್ದರಿಂದ ದಿನಸಿ, ಇತರ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಕಳೆದ ಒಂದುವರೆ ವರ್ಷದ ಲಾಕ್‍ಡೌನ್‍ನಿಂದ ಹೈರಾಣಾಗಿರುವ ಜನಸಾಮಾನ್ಯನಿಗೆ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ತಕ್ಷಣ ಬೆಲೆಯನ್ನು ಕಡಿಮೆ ಮಾಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಚುರುಕುಗೊಳಿಸಲಾಗುವುದು' ಎಂದು ಎಚ್ಚರಿಸಿದರು.

ತಹಶೀಲ್ದಾರ್ ಸೋಫಿಯಾ ಸುಲ್ತಾನ್ ಅವರಿಗೆ ಮನವಿ ಸಲ್ಲಿಸಲಾಯಿತು.

ವೆಂಕೋಬ ದೊರೆ, ಸಂಗಣ್ಣ ಬಾಕ್ಲಿ, ತಿಪ್ಪಣ್ಣ ಪೊಲೀಸಪಾಟೀಲ, ಶೌಕತ್‍ಅಲಿ ಖುರೇಶಿ, ಶಾಂತು ತಳವಾರಗೇರಿ, ಅಲ್ತಾಫ್ ಸಗರಿ, ಲಕ್ಷ್ಮಣ ಕವಡಿಮಟ್ಟಿ, ಮಹ್ಮದ್‍ಗೌಸ್ ಸಾಹುಕಾರ, ಎಂ.ಡಿ. ಬಾಬಾ, ವಿನಾಯಕ ಬಳಿಚಕ್ರ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT