ಕಡೇಚೂರು(ಸೈದಾಪುರ): ‘ಪರಿಸರ ಮಾಲಿನ್ಯ, ಅರಣ್ಯ ನಾಶ, ನೀರಿನ ಕೊರತೆ, ಹವಾಮಾನ ಬದಲಾವಣೆ ಇತ್ಯಾದಿ ಸಮಸ್ಯೆಗಳು ತಡೆಯಲು ಕೇವಲ ಜಾಗೃತಿ ಸಾಕಾಗುವುದಿಲ್ಲ, ಕಾನೂನು ಅರಿವು ಪಡೆದು ಈ ಭೂಮಿಯ ಪರಿಸರವನ್ನು ನಮ್ಮ ಮುಂದಿನ ಪೀಳಿಗೆಗೆ ನೀಡುವುದು ನಮ್ಮ ಕರ್ತವ್ಯವಾಗಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಧೀಶ ಮರಿಯಪ್ಪ ಅಭಿಪ್ರಾಯಪಟ್ಟರು.

ಸಮೀಪದ ಕಡೇಚೂರು ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಏರ್ಪಡಿಸಿದ ವಿಶ್ವ ಭೂ ದಿನದ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮ ದೇಶದಲ್ಲಿ ಪರಿಸರ ರಕ್ಷಣೆಗೆ ಅನೇಕ ಕಾನೂನುಗಳು ಜಾರಿಯಲ್ಲಿವೆ. ಆದರೆ ಅವುಗಳ ಬಗ್ಗೆ ಸರಿಯಾದ ತಿಳುವಳಿಕೆ ಅನೇಕ ಜನರಿಗೆ ಇಲ್ಲದಿರುವುದೇ ಕಳವಳದ ಸಂಗತಿ. ನಮ್ಮ ಹಕ್ಕುಗಳ ಜೊತೆ ಕರ್ತವ್ಯಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಪರಿಸರವನ್ನು ಹಾಳು ಮಾಡುವ ಯಾವುದೇ ಕೃತ್ಯ ಕಾನೂನಿನ ಪ್ರಕಾರ ಶಿಕ್ಷಾರ್ಹವಾಗಿದೆ’ ಎಂದು ತಿಳಿಸಿದರು.

ಸಹಾಯಕ ಕಾನೂನು ನೆರವು ಅಭೀರಕ್ಷಕಿ ಸುಷ್ಮಾ ಜಾಧವ್ ಮಾತನಾಡಿದರು.

ಮುಖಂಡರಾದ ಭೀಮಣ್ಣ ವಡವಟ್, ಬನ್ನಪ್ಪ ಸಜ್ಜನ್, ಸಂಗಪ್ಪ ಸಜ್ಜನ್, ಕಾಶಿನಾಥ ಶೆಟ್ಟಿಹಳ್ಳಿ, ರಜಿನಿಕಾಂತ, ಕವಿತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-30-808515063

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.