ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡೇಚೂರು: ವಿದ್ಯುತ್ ಉಪ ಕೇಂದ್ರದ ಕಾಮಗಾರಿ ಶೀಘ್ರ ಮುಗಿಸಿ

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
Last Updated 28 ನವೆಂಬರ್ 2020, 16:50 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಕೈಗೊಳ್ಳಲಾಗಿರುವ ವಿದ್ಯುತ್ ಉಪ ಕೇಂದ್ರದ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಏಕ ಗವಾಕ್ಷಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕೈಗಾರಿಕಾ ಘಟಕಗಳಿಗೆ ವಿದ್ಯುತ್ ಅತಿ ಮುಖ್ಯ. ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಪ್ರಮುಖವಾಗಿ ಫಾರ್ಮಾ ಘಟಕಗಳು ಸ್ಥಾಪನೆಯಾಗುತ್ತಿವೆ. ಆದ್ದರಿಂದ ಅಲ್ಲಿ ನಿರ್ಮಾಣವಾಗುತ್ತಿರುವ ವಿದ್ಯುತ್ ಉಪ ಕೇಂದ್ರದ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಬೇಕು. ಪ್ರಮುಖವಾಗಿ ಅಲ್ಲಿ ನಿರ್ಮಾಣವಾಗುತ್ತಿರುವ ಸಿಇಟಿಪಿ (ತಾಜ್ಯ ಸಂಸ್ಕರಣಾ ಘಟಕ) ವನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆಐಎಡಿಬಿ ಅಧಿಕಾರಿಗಳಿಗೆ ಸೂಚಿಸಿದರು.

ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಹಂಚಿಕೆಯಾಗಿರುವ ಘಟಕಗಳಿಗೆ ಕೈಗಾರಿಕೆ ಸ್ಥಾಪಿಸುವ ಕುರಿತು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಕೆಐಎಡಿಬಿ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿಯ ಮುಂದೆ ಬರುವ ಯೋಜನೆಗಳ ಅನುಮೋದನೆ ಹಾಗೂ ಜಮೀನು ಹಂಚಿಕೆ ಕುರಿತು ಪರಿಷ್ಕೃತ ಮಾರ್ಗಸೂಚಿಗಳ ಬಗ್ಗೆ ಸರ್ಕಾರದ ಆದೇಶದ ಕುರಿತು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ್.ವಿ. ರಘೋಜಿ ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ನಿವೇಶನ ಹಂಚಿಕೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಪರಿಶೀಲಿಸಿ ಜಿಲ್ಲಾ ಮಟ್ಟದ ಏಕ ಗವಾಕ್ಷಿ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದರು.

ಕೆಐಎಡಿಬಿಯ ಉಪ ಅಭಿವೃದ್ಧಿ ಅಧಿಕಾರಿ ಸುಭಾಷ ನಾಯಕ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಘವೇಂದ್ರ, ಪರಿಸರ ಅಧಿಕಾರಿ ವೆಂಕಟೇಶ, ಕೈಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಎನ್‌ ಮ್ಯಾಗೇರಿ, ಎಂ.ಎ.ಸಲೀಂ, ಕಾಸಿಯಾ ಪ್ರತಿನಿಧಿ ಹಾಗೂ ಚೇಂಬರ್ ಆಫ್ ಕಾಮರ್ಸ್‌ನ ಪ್ರತಿನಿಧಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT