ಪುರಸಭೆ ಸದಸ್ಯರಾದ ದೇವಿಂದ್ರಪ್ಪ ದೇಸಾಯಿ, ಜಟ್ಟೆಪ್ಪ ದಳಾರ, ಪರಶುರಾಮ ಗೋವಿಂದರ್, ಹೊಸೂರು ಅಮರೇಶ ದೊರೆ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಅಧ್ಯಕ್ಷ ಸ್ಥಾನದ ಚುನಾವಣೆ ಕುತೂಹಲದಿಂದ ಸಾರ್ವಜನಿಕರು ನೋಡುತ್ತಿದ್ದಾರೆ. ಈಗಾಗಲೇ ಆಕಾಂಕ್ಷಿಗಳು ದೇವಸ್ಥಾನ ಹಾಗೂ ಶಾಸಕರ ಭೇಟಿ ನೀಡಿ ಚರ್ಚಿಸುತ್ತಿದ್ದಾರೆ. ಮುಖಂಡರ ಮನವೊಲಿಸುವ ಕಾರ್ಯವೂ ನಡೆದಿದೆ. ಚುನಾವಣೆ ದಿನಾಂಕ ನಂತರ ಅಂತಿಮ ತೀರ್ಮಾನ ಹೊರಬೀಳಲಿದೆ.