ಕಕ್ಕೇರಾ: 2026ನೇ ಸಾಲಿನ ಬಜೆಟ್ನಲ್ಲಿ ಸರ್ಕಾರ ಕಕ್ಕೇರಾ ಉಪ ಪೊಲೀಸ್ ಠಾಣೆಯನ್ನು ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಿರುವ ಪ್ರಯುಕ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಪಟ್ಟಣದ ಉಪ ಪೊಲೀಸ್ ಠಾಣೆಗೆ ಮಂಗಳವಾರ ಭೇಟಿ ನೀಡಿದರು.

ಈ ವೇಳೆ ಗ್ರಾಮಾಡಳಿತಾಧಿಕಾರಿ ಬಸವರಾಜ ಶೆಟ್ಟಿ, ಕೆಪಿಸಿಸಿ ಸದಸ್ಯ ಗುಂಡಪ್ಪ ಸೊಲಾಪೂರ, ಪುರಸಭೆ ಅಧ್ಯಕ್ಷ ಪರಮಣ್ಣ ಕಮತಗಿ, ಉಪಾಧ್ಯಕ್ಷ ಜಟ್ಟೆಪ್ಪ ದಳಾರ ಮತ್ತು ಮುಖಂಡರ ಜತೆ ನೂತನ ಪೊಲೀಸ್ ಠಾಣೆ ನಿರ್ಮಾಣಕ್ಕಾಗಿ ಜಾಗದ ಕುರಿತು ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಪಟ್ಟಣದಲ್ಲಿರುವ ಪ್ರಸ್ತುತ ಉಪ ಪೊಲೀಸ್ ಠಾಣೆಯು ಪೊಲೀಸ್ ಠಾಣೆಯನ್ನಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಿದ್ದು, ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿಸುವ ಕುರಿತು ಹೊಸ ಕಟ್ಟಡ ನಿರ್ಮಾಣಕ್ಕಾಗಿ 1 ಎಕರೆ ಮತ್ತು ಪೊಲೀಸ್ ವಸತಿ ಗೃಹಗಳಿಗಾಗಿ ಜಾಗದ ಕುರಿತಾಗಿ ಕಂದಾಯ, ಪುರಸಭೆ ಆಡಳಿತ ಮಂಡಳಿ ಮತ್ತು ಮುಖಂಡರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ’ ಎಂದು ತಿಳಿಸಿದರು.

ಹುಣಸಗಿ ವೃತ್ತ ಸಿಪಿಐ ರವಿಕುಮಾರ ಎಸ್.ಎನ್., ಕೊಡೇಕಲ ಠಾಣಾಧಿಕಾರಿ ರಾಜಶೇಖರ ರಾಠೋಡ, ಸಿಬ್ಬಂದಿಗಳಾದ ಬೀರಪ್ಪ, ರಾಜು, ವಿನಾಯಕ, ದ್ಯಾವಪ್ಪ ಜಂಪಾ, ಬಸವರಾಜ ಸೇರಿದಂತೆ ಅನೇಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-30-1191448777

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.