ಹುಣಸಗಿ: ‘ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಉಂಟಾಗುವಂತಾಗಲು ಮನೆಯಲ್ಲಿ ಧನಾತ್ಮಕ ಶಕ್ತಿ ಬೇಕು. ಅದಕ್ಕೆ ಧ್ಯಾನವೇ ಮುಖ್ಯ ಕಾರಣ’ ಎಂದು ಕಲಬುರಗಿಯ ವಿಜಯಾ ಅಕ್ಕ ಹೇಳಿದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಪಟ್ಟಣ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮದ್ಯಪಾನ- ಧೂಮಪಾನ, ಮಾದಕ ವಸ್ತುಗಳ ಸೇವನೆ ಹಾಗೂ ಅಭ್ಯಾಸದಿಂದಾಗಿ ಸಮಾಜದ ಶಾಂತಿ, ಆರೋಗ್ಯ ಅಲ್ಲದೆ ಕುಟುಂಬದ ಏಕತೆಯನ್ನು ಹಾಳುಮಾಡುತ್ತದೆ. ದಿನಕಳೆದಂತೆ ವ್ಯಸನದಿಂದಾಗಿ ಮನೆಗಳು ಸಂಕಷ್ಟಕ್ಕೆ ಸಿಲುಕುತ್ತವೆ’ ಎಂದರು.

ಸಮಾಜ ಸೇವಾ ವಿಭಾಗದ ಬಿ.ಕೆ. ಪ್ರೇಮ ಅಣ್ಣ ಮಾತನಾಡಿದರು.

ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಸ್.ಬಿ.ಪಾಟೀಲ, ಶಿವಲೀಲಾ ಅಕ್ಕ, ಶಾಂತ ಅಕ್ಕ, ಉಷಾ ಅಕ್ಕ ಹಾಗೂ ಚಂದ್ರಶೇಖರ ದಂಡಿನ್, ಬಸವರಾಜಸ್ವಾಮಿ ಸ್ಥಾವರಮಠ, ಬಸವರಾಜ ಮಲಗಲದಿನ್ನಿ, ನಾಗಪ್ಪ ಅಡಿಕ್ಯಾಳ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-30-856744865

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.