ಸುರಪುರ: ‘ಪ್ರತಿ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚು ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಕೊಳ್ಳಬೇಕು. ಆ ಮೂಲಕ ಪಕ್ಷವನ್ನು ಬೇರುಮಟ್ಟದಿಂದ ಬಲ ಪಡಿಸಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ’ ಹೇಳಿದರು.

ಸಮೀಪದ ರಂಗಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಪಂಡಿತ ದೀನ್ದಯಾಳ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಜನರಿಗೆ ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಈ ಹಿಂದೆ ರಾಜ್ಯದಲ್ಲಿ ಇದ್ದ ನಮ್ಮ ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ತಿಳಿಸಬೇಕು. ಸಿದ್ದರಾಮಯ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು’ ಎಂದು ಸಲಹೆ ನೀಡಿದರು.

ಮುಖಂಡ ವೇಣುಗೋಪಾಲ ನಾಯಕ ಜೇವರ್ಗಿ ಮಾತನಾಡಿ, ‘ಪಂಡಿತ್ ದೀನ್ದಯಾಳ ಉಪಾಧ್ಯಾಯರ ಚಿಂತನೆಗಳ ಮೇಲೆ ಪಕ್ಷ ಕೆಲಸ ಮಾಡುತ್ತಿದೆ. ಪಕ್ಷದ ಸಿದ್ಧಾಂತಗಳು, ಸಂಘಟನಾ ಶಕ್ತಿ ಹಾಗೂ ರಾಷ್ಟ್ರಾಭಿವೃದ್ಧಿಯ ದಿಕ್ಕಿನಲ್ಲಿ ನಡೆಯುತ್ತಿರುವ ಕಾರ್ಯಗಳ ಕುರಿತು ತಿಳಿದುಕೊಳ್ಳಲು ಅಭಿಯಾನ ನೆರವಿಗೆ ಬರುತ್ತದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ ಮಾತನಾಡಿ, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿದೆ. ಜನಸಾಮಾನ್ಯರ ಮೇಲೆ ತೆರಿಗೆ ಭಾರ ಹಾಕುತ್ತಿದೆ. 2028ರಲ್ಲಿ ರಾಜ್ಯದಲ್ಲಿ ಮತ್ತೇ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ’ ಎಂದು ಭವಿಷ್ಯ ನುಡಿದರು.

ಮುಖಂಡ ಬಬ್ಲೂಗೌಡ ಮಾತನಾಡಿ, ‘ಕಳೆದ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ನಾವು ಸೋತಿದ್ದೇವೆ. ಸೋಲನ್ನು ಒಪ್ಪಿಕೊಂಡು ಸುಮ್ಮನೆ ಕುಳಿತಿಲ್ಲ. ಮತ್ತೆ ಪುಟಿದೇಳುತ್ತೇವೆ. ಈ ಬಾರಿ ಗೆಲುವಿಗೆ ಕಾರ್ಯಕರ್ತರು ಹರಸಹಾಸ ಪಡಬೇಕು. ನಿರಂತರ ಶ್ರಮ ವಹಿಸಬೇಕು’ ಎಂದು ಹೇಳಿದರು.

ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಪರುಶುರಾಮ ಕುರುಕುಂದಿ, ಮೇಲಪ್ಪ ಗುಳಗಿ, ಸುರಪುರ ಮಂಡಲ ಅಧ್ಯಕ್ಷ ವೇಣುಮಾಧವ ನಾಯಕ, ಹುಣಸಗಿ ಮಂಡಲ ಅಧ್ಯಕ್ಷ ಸಂಗಣ್ಣ ವೈಲಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಯಲ್ಲಪ್ಪ ಕುರುಕುಂದಿ, ಮುಖಂಡರಾದ ಬಲಭೀಮನಾಯಕ ಬೈರಿಮಡ್ಡಿ, ಶಂಕರನಾಯಕ, ನರಸಿಂಹಕಾಂತ ಪಂಚಮಗಿರಿ, ಶ್ರೀನಿವಾಸ ನಾಯಕ ದರಬಾರಿ, ಪಾರಪ್ಪ ಗುತ್ತೇದಾರ, ಸಣ್ಣ ದೇಸಾಯಿ ದೇವರಗೋನಾಲ, ಮಲ್ಲೇಶಿ ಪಾಟೀಲ ನಾಗರಾಳ, ದೇವಿಂದ್ರಪ್ಪಗೌಡ ದೇವರಗೋನಾಲ, ಹೊನ್ನಪ್ಪ ತಳವಾರ, ನಿಂಗಣ್ಣ ಐಕೂರ, ಲಕ್ಷ್ಮೀಕಾಂತ ದೇವರಗೋನಾಲ, ವೆಂಕಟೇಶ ನಾಯಕ ಚನ್ನಪಟ್ಟಣ, ಬೀಮಾಶಂಕರ ಬಿಲ್ಲವ್, ಈಶ್ವರ ನಾಯಕ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-30-680405746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.