ಶಹಾಪುರ: ‘ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ’ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತೆ ಮಮತಾ ನಾಯಕ ಹೇಳಿದರು.

ತಾಲ್ಲೂಕಿನ ಚಂದಾಪುರ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ‘ಶಾಲಾ ಪ್ರಾರಂಭೋತ್ಸವ’ ಅಂಗವಾಗಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕುಮಾರ ಪಾರಶೆಟ್ಟಿ ಮಾತನಾಡಿ, ‘ಶಾಲೆಯ ಆರಂಭದಲ್ಲಿಯೇ ವರ್ಷದ ಯೋಜನೆಗಳನ್ನು ಮುಖ್ಯ ಶಿಕ್ಷಕರು ತಯಾರಿಸಿಕೊಂಡು, ಎಲ್ಲ ಶಿಕ್ಷಕರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದಾರೆ. ಶಿಕ್ಷಕರು ಸೇತುಬಂಧ ಕಾರ್ಯಕ್ರಮವನ್ನು ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ತಾಪಂ ಇಒ ಬಸವರಾಜ ಶರಬೈ, ತಾಲ್ಲೂಕು ಶಿಕ್ಷಣ ಸುಧಾರಣಾ ಸಮಿತಿಯ ಅಧ್ಯಕ್ಷ ಶಾಂತಗೌಡ ಪಾಟೀಲ, ಸಿದ್ದಣ ಮಾನಸೂಣಗಿ, ಬಸವರಾಜ ಯಾಳಗಿ, ನಾಗರಾಜ, ರಾಮನಗೌಡ ಖಾನಾಪುರ, ರಮೇಶ ಚವ್ಹಾಣ, ಎಸ್ಡಿಎಂಸಿ ಅಧ್ಯಕ್ಷ ನಾನಗೌಡ ಭಾಗವಹಿಸಿದ್ದರು.

ಮೆರವಣಿಗೆ: ‘ಶಾಲಾ ಪ್ರಾರಂಭೋತ್ಸವ’ದ ಅಂಗವಾಗಿ ಶಾಲೆಯನ್ನು ತಳಿರು-ತೋರಣ, ರಂಗೋಲಿಗಳಿಂದ ಸಿಂಗಾರ ಮಾಡಿ, ಊರಿನ ಪ್ರಮುಖ ಬೀದಿಗಳಲ್ಲಿ ಎತ್ತಿನ ಬಂಡಿ ಮತ್ತು ಡೊಳ್ಳು ವಾದ್ಯಗಳ ಮೂಲಕ ಮೆರವಣಿಗೆಯೊಂದಿಗೆ ಮಕ್ಕಳನ್ನು ಶಾಲೆಗೆ ಕರೆತಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-30-1427521356

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.