ಶುಕ್ರವಾರ, ಡಿಸೆಂಬರ್ 2, 2022
23 °C

ಹೈ.ಕ ವಿಶೇಷ ಕೋಶ ಕಲಬುರಗಿಗೆ: ಸಿ.ಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೈದಾಪುರ: ‘ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನದಲ್ಲಿರುವ ಹೈದರಾಬಾದ್ ಕರ್ನಾಟಕ ವಿಶೇಷ ಕೋಶವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧೀನಕ್ಕೆ ಒಳಪಡಿಸಿ, ಕೇಂದ್ರ ಸ್ಥಾನವಾದ ಕಲಬುರಗಿಗೆ ಸ್ಥಳಾಂತರಿಸಲು ಆದೇಶಿಸಿಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಡಾ.ಸಾಬಣ್ಣ ತಳವಾರ ಅವರು ವಿಧಾನಸಭೆ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಅವರು ಈ ಉತ್ತರ ನೀಡಿದ್ದಾರೆ.

‘ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಸ್ಥಾಪಿಸಿರುವ ಸಂವಿಧಾನ ತಿದ್ದುಪಡಿ 371(ಜೆ) ಅಡಿಯ ವಿಶೇಷ ಕೋಶವನ್ನು ಬೆಂಗಳೂರಿನಿಂದ ಕಲಬುರಗಿಗೆ ಸ್ಥಳಾಂತರರಿಸಿ, ಈ ಭಾಗದ ಜನರ  ಅಲೆದಾಟ ತಪ್ಪಿಸಬೇಕು. ದಶಕ ಕಳೆದರೂ ಈ ಬೇಡಿಕೆ ಈಡೇರಿಲ್ಲ. ಕಚೇರಿ ಸ್ಥಳಾಂತರಕ್ಕೆ ಏನು ಕ್ರಮ ಕೈಗೊಳ್ಳಲಾಗಿದೆ’ ಎಂದು ಸಾಬಣ್ಣ ಅವರು ಸದನದಲ್ಲಿ ಪ್ರಶ್ನಿಸಿದ್ದರು.

ಇದಕ್ಕೆ ಲಿಖಿತ ಉತ್ತರ ನೀಡಿದ ಮುಖ್ಯಮಂತ್ರಿ, ಕಚೇರಿ ಸ್ಥಳಾಂತರ ಮಾಡಿದ್ದನ್ನು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು