ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ’

ಸುರಪುರ; ಪೂರ್ವಭಾವಿ ಸಭೆಯಲ್ಲಿ ನಿರ್ಧಾರ
Last Updated 7 ಡಿಸೆಂಬರ್ 2022, 5:28 IST
ಅಕ್ಷರ ಗಾತ್ರ

ಸುರಪುರ: ‘ಬುಧವಾರ (ಡಿ.7) ಬೆಳಗ್ಗೆ 11.30ಕ್ಕೆ ‘ಕನ್ನಡ ಜ್ಯೋತಿ ರಥ’ ಜಾಥಾ ಆಗಮಿಸಲಿದ್ದು ಅದ್ಧೂರಿಯಾಗಿ ಸ್ವಾಗತಿಸಲಾಗುವುದು’ ಎಂದು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ತಿಳಿಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನಿಷ್ಠಿ ಎಂಜನಿಯರಿಂಗ್ ಕಾಲೇಜಿನಲ್ಲಿ ಜಾಥಾ ಬರಮಾಡಿಕೊಳ್ಳಲಾಗುವುದು. ಬಳಿಕ ಅದಿತಿ ಹೊಟೇಲ್‌ವರೆಗೆ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ಬೀಳ್ಕೊಡಲಾಗುವುದು ಎಂದು ತಿಳಿಸಿದರು.

ಜಾಥಾದಲ್ಲಿ ಶಾಲಾ ಮಕ್ಕಳು ಲೇಜಿಮ್ ಮತ್ತು ಡ್ರಮ್ ಮೂಲಕ ಭಾಗವಹಿಸುವರು.

ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು, ಸಾಹಿತಿಗಳು, ಕನ್ನಡಪರ, ರೈತಪರ, ಪ್ರಗತಿಪರ ಸಂಘಟನೆಗಳ ಮುಖಂಡರು, ನಿಷ್ಠಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಇತರೆ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವರು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಶರಣಬಸವ ಯಾಳವಾರ
ಮಾತನಾಡಿದರು.

ಸಭೆಯಲ್ಲಿ ಸಾಹಿತಿ ಶ್ರೀನಿವಾಸ ಜಾಲವಾದಿ, ನಿವೃತ್ತ ಎಸ್.ಪಿ. ಚಂದ್ರಕಾಂತ ಭಂಡಾರೆ, ರಾಘವೇಂದ್ರ ಭಕ್ರಿ, ತಾಪಂ ಇಒ ಚಂದ್ರಶೇಖರ ಪವಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಪೂಜಾರ, ಟಿಎಚ್‍ಒ ಡಾ. ಆರ್.ವಿ.ನಾಯಕ, ಸಬ್ ರಜಿಸ್ಟ್ರಾರ್ ಗುರುರಾಜ ಸಜ್ಜನ, ಸಿಡಿಪಿಒ ಅನಿಲಕುಮಾರ, ಅಕ್ಷರ ದಾಸೋಹ ಎಡಿ ಅಮರೇಶ ಕಂಬಾರ್, ಸಮಾಜ ಕಲ್ಯಾಣಾಧಿಕಾರಿ ಸತ್ಯನಾರಾಯಣ ದರಬಾರಿ, ಎಸ್‍ಟಿ ಇಲಾಖೆ ಎಡಿ ಎಂ.ಸಲೀಂ, ಬಿಸಿಎಂ ಅಧಿಕಾರಿ ತಿಪ್ಪಾರೆಡ್ಡಿ, ಅಬಕಾರಿ ಇನ್ಸ್‌ಪೆಕ್ಟರ್ ಜಾಫರ್ ಪಟೇಲ್, ಗುರುಸ್ವಾಮಿ ಸೇರಿದಂತೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT