ಯಾದಗಿರಿ: ಜಿಲ್ಲಾಧಿಕಾರಿಯಿಂದ ರಾಷ್ಟ್ರ ಧ್ವಜಾರೋಹಣ

ಯಾದಗಿರಿ: ನಗರದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಭಾವೈಕ್ಯತಾ ಸಮಿತಿ ಹಾಗೂ ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯೋತ್ಸವದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಬಹುಭಾಷೆ, ಧರ್ಮ ಮತ್ತು ಬಹು ಸಂಸ್ಕೃತಿಗಳ ಜಿಲ್ಲೆಯಾಗಿರುವ ಯಾದಗಿರಿ ಜಿಲ್ಲೆ, ವಿವಿಧ ಕ್ಷೇತ್ರಗಳ ಪರಿಣಿತರನ್ನು ಹೊಂದಿದೆ. ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಆದ ಹಿರಿಮೆಯನ್ನು ಗಳಿಸಿಕೊಂಡಿದೆ ಎಂದರು.
ಕೋವಿಡ್ ನಿಯಂತ್ರಣಕ್ಕೆ ಲಸಿಕಾ ಮಹಾಮೇಳದಲ್ಲಿ ಗುರಿ ಸಾಧಿಸುವತ್ತ ದಿಟ್ಟ ಹೆಜ್ಜೆ ಇಡುತ್ತಿದ್ದೇವೆ ಎಂದರು.
ಭೂಮಿ ಯೋಜನೆಯಡಿ ಜಿಲ್ಲೆ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳ ವಿಲೇವಾರಿಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದು, ಹೆಮ್ಮೆಯ ಸಂಗತಿ ಎಂದರು.
ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಯೂಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಗರಸಭೆ ಪ್ರಭಾರಿ ಪೌರಾಯುಕ್ತ ಬಕ್ಕಪ್ಪ ಹೊಸಮನಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.