ಭಾನುವಾರ, ಜನವರಿ 24, 2021
27 °C

ಯಾದಗಿರಿ ಜಿಲ್ಲೆಗೆ ವಿಶೇಷ ಅನುದಾನ ಘೋಷಿಸಲು ಕರವೇ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯ ಅಭಿವೃದ್ಧಿಗಾಗಿ ₹500 ಕೋಟಿ ವಿಶೇಷ ಅನುದಾನ ಘೋಷಣೆ ಮಾಡುವಂತೆ ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಟಿ.ದಾಸನಕೇರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ನೂತನವಾಗಿ ರಚನೆಯಾದ ತಾಲ್ಲೂಕುಗಳಾದ ವಡಗೇರಾ, ಹುಣಸಗಿ, ಗುರುಮಠಕಲ್ ಕೇಂದ್ರಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು. ವಡಗೇರಾ ಗ್ರಾಮವನ್ನು ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿಸಬೇಕು. ಪ್ರಸಕ್ತ ಸಾಲಿನಲ್ಲಿ ಸ್ನಾತಕೋತ್ತರ ಎಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ನದಿಯಿಂದ ನೆರೆ ಹಾವಳಿಗೆ ತುತ್ತಾಗಿರುವ ಸಾರ್ವಜನಿಕರಿಗೆ ಸೂಕ್ತ ಪರಿಹಾರ ಕೊಡಿಸಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಮುಖಂಡರಾದ ಚಂದ್ರಶೇಖರ ಹಿರೇಮಠ, ಶರಣಗೌಡ ಅಬ್ಬೆತುಮಕೂರ, ಪರಶುರಾಮ ಒಡೆಯರ್, ರಾಮು ನಾಟೇಕಾರ, ವಾಸು ಬದ್ದೇಪಲ್ಲಿ, ಶ್ರೀಕಾಂತ ತೆಳಿಗೇರಿ, ಮಾರುತಿ ಬಳಿಚಕ್ರ, ರೆಡ್ಡಿ ಠಾಣಗುಂದಿ, ಶ್ರೀಶಾಂತ ಬಾಲಾಜಿ, ಆಶಪ್ಪ, ಶಿವು ನಕ್ಕಲ್ ಮಾರುತಿ, ವಿಶ್ವನಾಥ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.