ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಸಿದ್ದಲಿಂಗಯ್ಯ ಅವರಿಗೆ ‘ಕವಿ ನಮನ’

Last Updated 22 ಜೂನ್ 2021, 12:48 IST
ಅಕ್ಷರ ಗಾತ್ರ

ಯಾದಗಿರಿ: ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಡಾ.ಸಿದ್ದಲಿಂಗಯ್ಯ ಅವರಿಗೆ ‘ಕವಿ ನಮನ’ ಕಾರ್ಯಕ್ರಮ ಮಾಡಲಾಯಿತು.

ಈ ವೇಳೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರಡ್ಡಿ ಅವರು, ‘ಡಾ.ಸಿದ್ದಲಿಂಗಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ ಕವಿ ಡಾ.ಸಿದ್ದಲಿಂಗಯ್ಯ ಅವರ ಕೆಲಸ ಶ್ಲಾಘನೀಯ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತೆ ಆಗಿದೆ‘ ಎಂದರು.

‘ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ...‘ ಇದು ಬರೀ ಚಲನಚಿತ್ರ ಗೀತೆಯಾಗಿ ಉಳಿಯಲಿಲ್ಲ. ಜಾನಪದದಂತೆ ಎಲ್ಲರನ್ನು ತಲುಪಿತು. ದಲಿತ ಸಮುದಾಯದಲ್ಲಿ ಸ್ವಾಭಿಮಾನದ ಕಿಡಿ ಹಚ್ಚಿದ ಅವರು, ರಾಜ್ಯದ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಕರ್ನಾಟಕದ ದಲಿತ ಚಳವಳಿಗೆ ಹೊಸ, ಸಂಚಲನ ನೀಡಿದ್ದ ಅಪರೂಪದ ಸಾಹಿತಿ, ಸದಾಕಾಲ ಸಾಮಾಜಿಕ ಸಮಾನತೆಯ ಹೋರಾಟದಲ್ಲಿ ತೊಡಗಿಕೊಂಡಿದ್ದರು‘ ಎಂದರು.

‘ದಲಿತ ಕವಿ’ ಎಂದೇ ಹೆಸರಾದ ಸಿದ್ದಲಿಂಗಯ್ಯನವರು ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ವಿದ್ಯಾರ್ಥಿ ದೆಸೆಯಲ್ಲಿಯೇ ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು ಎಂದು ಹೇಳಿದರು.

ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಮಾತನಾಡಿ, ‘ಬೆಂಗಳೂರಿನ ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಸಿದ್ದಲಿಂಗಯ್ಯನವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆಯುವ ಅಭ್ಯಾಸ ಬೆಳೆಸಿಕೊಂಡಿದ್ದರು‘ ಎಂದು ತಿಳಿಸಿದರು.

ಜಿಲ್ಲಾಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ, ಯುಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ಬಿಜೆಪಿ ಮುಖಂಡರಾದ ಖಂಡಪ್ಪ ದಾಸನ್, ಶರಣಗೌಡ ಬಾಡಿಯಾಳ, ನಗರಸಭೆ ಸದಸ್ಯರಾದ ಸುರೇಶ್ ಅಂಬೀಗೆರ, ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ಮನೋಹರ ಪವಾರ್, ಶರಣು ಆಶನಾಳ, ಶಿವರಾಜ್ ದಾಸನಕೆರೆ, ಸುರೇಶ್ ಚವಾಣ್, ಮಹಾದೇವಪ್ಪ ಗಣಪುರ, ಶ್ರೀಕಾಂತ್ ಸುಂಗಲಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT