ಯಾದಗಿರಿ: ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಅಭಿಪ್ರಾಯಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಯಾದಗಿರಿ ಹಾಗೂ ಕಾಯಕ ಶರಣರ ಜಯಂತ್ಯೋತ್ಸವ ಸಮಿತಿ ಹಾಗೂ ವಿವಿಧ ಇಲಾಖೆಗಳು ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಕಾಯಕ ಶರಣರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಚಿರಪರಿಚಿತವಾಗಿವೆ ಎಂದರು.

ಯಾದಗಿರಿಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಸರ್ವೋದಯ ಎಸ್.ಎಸ್. ಮಾತನಾಡಿ, 12ನೇ ಶತಮಾನವು ಧಾರ್ಮಿಕ, ಸಾಮಾಜಿಕ, ರಾಜಕೀಯವಾಗಿ ಕ್ರಾಂತಿ ಉಂಟುಮಾಡಿದೆ. ಇವತ್ತಿನ ನಮ್ಮ ಸಂವಿಧಾನದ ಪಾರ್ಲಿಮೆಂಟ್ ಮಾದರಿಯಲ್ಲಿ ಅಂದಿನ ಅನುಭವ ಮಂಟಪ ಇತ್ತು. ಯಾರನ್ನೂ ಕೀಳಾಗಿ ಕಾಣಬಾರದು ಎಂಬುವುದು ಬಸವೇಶ್ವರರ ಸಮಾನತೆಯ ತತ್ವವಾಗಿದ್ದು, ಅವರ ಹಾದಿಯಲ್ಲಿ ನಡೆದ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿಯವರು ಶರಣ ಪಡೆಯ ಮಹನೀಯರಾಗಿದ್ದಾರೆ ಎಂದು ಹೇಳಿದರು.

ಶರಣದ ವಚನಗಳು ಇಂದಿನ ಆಧುನಿಕ ಯುಗದಲ್ಲಿ ಅತ್ಯವಶ್ಯಕವಾಗಿವೆ. ಯುವ ಪೀಳಿಗೆ ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರುದ್ರಗೌಡ ಪಾಟೀಲ, ಶಿವರಾಜ ದಾಸನಕೇರಿ, ಉರಿಲಿಂಗಪೆದ್ದಿರವರ ಸಮಾಜದ ಮುಖಂಡ ಚಂದ್ರಕಾಂತ ಮುನಿಯಪ್ಪನೋರ್, ಸಮಗಾರ ಹರಳಯ್ಯ ಸಮಾಜರವರ ಮುಖಂಡ ರಾದ ಮುತ್ತಣ್ಣ ಮೊಬ್ರಕರ್, ಮಾದರ ಧೂಳಯ್ಯರವರ, ಬಸವರಾಜ ಮೇತ್ರಿ, ಸಾಹಿತಿ ಶ್ರೀಶೈಲ ಪೂಜಾರಿ, ಗುರುಪ್ರಸಾದ್ ವೈದ್ಯ, ದುರ್ಗಪ್ಪ ಪೂಜಾರಿ, ಶರಣು ನಾಟೇಕರ್, ಮರೆಪ್ಪ ಚಟ್ಟರಕರ್
ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.