ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಭಾವಿ: ಮೊಬೈಲ್ ಎಕ್ಸ್‌ರೇ ಘಟಕ ಆರಂಭ

Published 21 ಜನವರಿ 2024, 15:23 IST
Last Updated 21 ಜನವರಿ 2024, 15:23 IST
ಅಕ್ಷರ ಗಾತ್ರ

ಕೆಂಭಾವಿ: ಆಧುನಿಕ ಉಪಕರಣಗಳು ವೈದ್ಯಕೀಯ ಲೋಕದಲ್ಲಿ ಇತಿಹಾಸವನ್ನೇ ಸೃಷ್ಟಿಸಿದ್ದು ಅವುಗಳ ಬಳಕೆ ಕುರಿತು ತಿಳಿವಳಿಕೆ ಪಡೆಯುವುದು ಅತ್ಯಗತ್ಯ ಎಂದು ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಮೊಬೈಲ್ ಎಕ್ಸ್‌ರೇ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ದೇಹದ ಪ್ರತಿಯೊಂದು ಅಂಗ ಪತ್ತೆಹಚ್ಚಲು ಆಧುನಿಕ ಉಪಕರಣಗಳು ಹೆಚ್ಚು ಸಹಕಾರಿಯಾಗಿವೆ. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸರ್ಕಾರ ಹಂತಹಂತವಾಗಿ ಎಲ್ಲ ಸೌಲಭ್ಯಗಳನ್ನು ನೀಡುತ್ತಿದ್ದು, ವೈದ್ಯರು ಮತ್ತು ಸಿಬ್ಬಂದಿಯ ಉತ್ತಮ ಕಾರ್ಯನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು.

ನಂತರ 46 ರೋಗಿಗಳ ಎದೆಭಾಗದ ಎಕ್ಸ್‌ರೇಯನ್ನು ಉಚಿತವಾಗಿ ಮಾಡಲಾಯಿತು.

ತಾಲ್ಲೂಕು ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಹಣಮಮಂತ ಅಣವಾರ, ರಾಘವೇಂದ್ರ ನಾಯಕ, ಚಿದಾನಂದ, ರೇವಣಸಿದ್ದಪ್ಪ, ಗುಲ್ಜಾನ್ ಬೇಗಂ ಹಾಗೂ ಆರೋಗ್ಯ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT