ಗುರುವಾರ , ಜೂನ್ 17, 2021
21 °C

ಕೆಂಭಾವಿ: ಸರಳ ಸ್ವಾತಂತ್ರ್ಯ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಂಭಾವಿ: ಪಟ್ಟಣ ಸೇರಿದಂತೆ ವಿವಿಧೆಡೆ ಶನಿವಾರ ಸರ್ಕಾರಿ ಕಚೇರಿ, ಸಂಘ– ಸಂಸ್ಥೆಗಳಲ್ಲಿ ಸರಳವಾಗಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು.

ಪುರಸಭೆ ಕಚೇರಿಯಲ್ಲಿ ಮುಖ್ಯಾಧಿಕಾರಿ ಪ್ರಕಾಶ ಬಾಗಲಿ ಧ್ವಜಾರೋಹಣ ಮಾಡಿದರು. ಪತ್ರಕರ್ತ ಸಂಜೀವರಾವ ಕುಲಕರ್ಣಿ, ಪ್ರಭಾಕರ, ಯಮುನೇಶ ಯಾಳಗಿ ಮತ್ತು ಸಿಬ್ಬಂದಿ ಇದ್ದರು.

ಪಟ್ಟಣದ ನಾಡ ಕಚೇರಿಯಲ್ಲಿ ಉಪತಹಶೀಲ್ದಾರ್ ಮಲ್ಲಿಕಾರ್ಜುನ ಪಾಟೀಲ, ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪಿಎಸ್‍ಐ ಸುದರ್ಶನರೆಡ್ಡಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಪ್ರಭಾರಿ ಪ್ರಾಚಾರ್ಯ ಲಕ್ಷ್ಮಣ ರಾಠೋಡ ಧ್ವಜಾರೋಹಣ ನೆರವೇರಿಸಿದರು.

ಜೆಸ್ಕಾಂ ಕಚೇರಿಯಲ್ಲಿ ಶಾಖಾಧಿಕಾರಿ ಶ್ರೀಶೈಲ, ಬಾಲಕರ ಪ್ರೌಢ ಶಾಲೆಯಲ್ಲಿ ಮುಖ್ಯಶಿಕ್ಷಕ ಕೆ. ಆರ್.ಪಾಟೀಲ, ಕನ್ಯಾ ಪ್ರೌಢಶಾಲೆಯಲ್ಲಿ ಮುಖ್ಯಗಶಿಕ್ಷಕ ಅನಿಲಕುಮಾರ, ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕ ಅಂಬಣ್ಣ ತಳವಾರ, ಸ್ಪಂದನ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಡಿ.ಸಿ ಪಾಟೀಲ ಧ್ವಜಾರೋಹಣಗೈದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ರೈತ ಸಂಪರ್ಕ ಕೇಂದ್ರ, ಹೆಗ್ಗನದೊಡ್ಡಿ ಗ್ರಾಮ ಪಂಚಾಯಿತಿ ಕಚೇರಿ, ನಗನೂರ ಗ್ರಾಮ ಪಂಚಾಯಿತಿ ಕಚೇರಿ, ಯಾಳಗಿ ಗ್ರಾಮ ಪಂಚಾಯತಿ ಕಾರ್ಯಾಲಯ, ಜನತಾ ಕಾಲೊನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಪ್ರೌಢ ಶಾಲೆ, ಕೂಡಲಗಿ ಪ್ರಗತಿ ಕಿರಿಯ ಪ್ರಾಥಮಿಕ ಶಾಲೆ,  ಮುದನೂರ ಗ್ರಾಮದ ಶ್ರೀ ದೇವರ ದಾಸೀಮಯ್ಯ ಹಿರಿಯ ಪ್ರಾಥಮಿಕ ಶಾಲೆ  ಮತ್ತು ಹೆಗ್ಗನದೊಡ್ಡಿ ಕ್ರಾಸ್‍ನ ಶ್ರೀಕೃಷ್ಣ ಪಬ್ಲಿಕ್ ಶಾಲೆ ಸೇರಿದಂತೆ ಹಲವೆಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.