ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೊಗರಿ ಖರೀದಿಸಲು ಸಿದ್ಧತೆಗೆ ಸೂಚನೆ

ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ಸಭೆ
Last Updated 21 ಡಿಸೆಂಬರ್ 2018, 13:48 IST
ಅಕ್ಷರ ಗಾತ್ರ

ಯಾದಗಿರಿ: 2018-19ನೇ ಸಾಲಿನ ಮುಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಕ್ವಿಂಟಲ್ ತೊಗರಿಗೆ ಕೇಂದ್ರ ಸರ್ಕಾರ ಘೋಷಿಸಿದ ₹5,675 ಬೆಂಬಲ ಬೆಲೆ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ₹425 ಸೇರಿದಂತೆ ಒಟ್ಟು 6,100 ನಂತೆ ತೊಗರಿ ಖರೀದಿಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪ್ರತಿ ಖರೀದಿ ಕೇಂದ್ರಗಳ ಹೋಬಳಿ ಮಟ್ಟದಲ್ಲಿ ಉಪ ತಹಶೀಲ್ದಾರರು ನೋಡಲ್ ಅಧಿಕಾರಿಗಳಾಗಿರುತ್ತಾರೆ. ಅದರಂತೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕಿದೆ. ಖರೀದಿ ಕೇಂದ್ರಗಳಲ್ಲಿ ಸಮಸ್ಯೆ ಕಂಡುಬಂದರೆ ನೋಡಲ್ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಜತೆಗೆ ಗ್ರೇಡರ್‌ಗಳನ್ನು ನೇಮಿಸಬೇಕು’ ಎಂದು ಹೇಳಿದರು.

ಖರೀದಿ ಪ್ರಮಾಣಕ್ಕನುಗುಣವಾಗಿ ಖಾಲಿ ಚೀಲಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಗೋದಾಮುಗಳಲ್ಲಿ ತೊಗರಿ ದಾಸ್ತಾನು ಮಾಡಿಕೊಳ್ಳಲು ಸ್ಥಳಾವಕಾಶ ಇಟ್ಟುಕೊಳ್ಳಬೇಕು. ಖರೀದಿ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ತಾಂತ್ರಿಕ ತರಬೇತಿ ನೀಡುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಂಟಿ ಕೃಷಿ ನಿರ್ದೇಶಕಿ ಆರ್.ದೇವಿಕಾ , ಸಹಕಾರ ಸಂಘಗಳ ಉಪ ನಿಬಂಧಕ ವಿಶ್ವನಾಥ ಮಲಕೂಡ, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಭೀಮರಾಯ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಹಾಪುರ ಶಾಖಾ ವ್ಯವಸ್ಥಾಪಕ ಎನ್.ಎಚ್.ಮಾರಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT