ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಿಸಾನ್ ಸಮ್ಮಾನ್ ನೋಂದಣಿ ಪೂರ್ಣಗೊಳಿಸಿ’

ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಸೂಚನೆ
Last Updated 19 ಜುಲೈ 2019, 14:55 IST
ಅಕ್ಷರ ಗಾತ್ರ

ಯಾದಗಿರಿ: ‘ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರನ್ನು ನೋಂದಾಯಿಸುವ ಪ್ರಕ್ರಿಯೆಯನ್ನು ಮೂರು ದಿನಗಳಲ್ಲಿ ಪೂರ್ಣಗೊಳಿಸಿ, ರೈತರು ಈ ಯೋಜನೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅನುಷ್ಠಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಕಂದಾಯ, ಗ್ರಾಮೀಣಾಭಿವೃದ್ಧಿ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಮಗೆ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಯೋಜನೆಯ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ರೈತರಿಂದ ಸರ್ವೇ ನಂಬರ್, ಆಧಾರ್ ಕಾರ್ಡ್, ಆಧಾರ್ ಸಂಖ್ಯೆ ಜೋಡಣೆ ಮಾಡಿದ ಬ್ಯಾಂಕ್ ಪಾಸ್‍ಬುಕ್ ನಕಲು ಪ್ರತಿಗಳೊಂದಿಗೆ ಸ್ವಯಂಘೋಷಣಾ ಪತ್ರ ಪಡೆದು ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಬೇಕು’ ಎಂದರು.

‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಪ್ರತಿ ರೈತ ಕುಟುಂಬಕ್ಕೆ ಒಂದು ವರ್ಷಕ್ಕೆ ₹ 6 ಸಾವಿರ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಎರಡನೇಮತ್ತು ಮೂರನೆಯ ಕಂತುಗಳಿಗೆ ರೈತರಿಂದ ಪದೇಪದೇ ಮಾಹಿತಿ ಸಂಗ್ರಹಿಸುವ ಅಗತ್ಯವಿಲ್ಲ. ಆಧಾರ್ ಸಂಖ್ಯೆ ಜೋಡಣೆ ಮಾಡಿದ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತದೆ’ ಎಂದು ಮಾಹಿತಿ ನೀಡಿದರು.

‘ಕುಟುಂಬದ ಒಬ್ಬರು ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ. ರೈತರ ಹೆಸರಿನಲ್ಲಿ ಎಷ್ಟೇ ಜಮೀನು, ಸರ್ವೇ ನಂಬರ್ ಇದ್ದರೂ ಒಂದೆ ಅರ್ಜಿ ಪರಿಗಣಿಸಲಾಗುತ್ತದೆ’ ಎಂದು ತಿಳಿಸಿದರು.

ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಸಹಾಯಕ ಕೃಷಿ ನಿರ್ದೇಶಕ ಧೂಳಪ್ಪ, ಗುರುಮಠಕಲ್ ತಹಶೀಲ್ದಾರ್ ಶ್ರೀಧರಾಚಾರ್ಯ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.


ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT