ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಸಾನ್ ಸಮ್ಮಾನ್ ನೋಂದಾಯಿಸಿ: ಜಿಲ್ಲಾಧಿಕಾರಿ

Last Updated 6 ಜುಲೈ 2019, 15:59 IST
ಅಕ್ಷರ ಗಾತ್ರ

ಯಾದಗಿರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಕೆಗೆ ಜುಲೈ 10ರವರೆಗೆ ಅವಕಾಶ ಇದ್ದು, ರೈತರು ಸೂಕ್ತ ದಾಖಲಾತಿಗಳೊಂದಿಗೆ ಹೆಸರು ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ತಿಳಿಸಿದರು.

ತಾಲ್ಲೂಕಿನ ಮುದ್ನಾಳ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುಷ್ಠಾನ ಪರಿಶೀಲಿಸಿದ ನಂತರ ರೈತರೊಂದಿಗೆ ಮಾತನಾಡಿದರು.

ಯೋಜನೆ ಅಡಿಯಲ್ಲಿ ಪ್ರತಿ ರೈತ ಕುಟುಂಬಕ್ಕೆ ಒಂದು ವರ್ಷಕ್ಕೆ ₹6000 ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳಲ್ಲಿ ನೀಡಲು ಉದ್ದೇಶಿಸಲಾಗಿದೆ. ಎರಡನೆಯ ಮತ್ತು ಮೂರನೆಯ ಕಂತುಗಳಿಗೆ ಪದೇಪದೇ ಮಾಹಿತಿ ನೀಡುವ ಅಗತ್ಯವಿರುವುದಿಲ್ಲ. ಆಧಾರ್ ಸಂಖ್ಯೆ ಜೋಡಣೆ ಮಾಡಿದ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತದೆ. ರೈತರು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ನಕಲು ಪ್ರತಿಗಳು ಹಾಗೂ ಜಮೀನಿನ ಸರ್ವೇ ಸಂಖ್ಯೆಯೊಂದಿಗೆ ರೈತ ಸಂಪರ್ಕ ಕೇಂದ್ರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸ್ವಯಂಘೋಷಣಾ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಕುಟುಂಬದ ಒಬ್ಬರು ಮಾತ್ರ ಈ ಯೋಜನೆಗೆ ಅರ್ಹರು. ರೈತರ ಹೆಸರಿನಲ್ಲಿ ಎಷ್ಟೇ ಜಮೀನು/ ಸರ್ವೇ ನಂಬರ್ ಇದ್ದರೂ ಒಂದೇ ಅರ್ಜಿ ಪರಿಗಣಿಸಲಾಗುತ್ತದೆ. ನಿವೃತಿ ಅಥವಾ ಹಾಲಿ ಸೇವೆಯಲ್ಲಿರುವ ಸರ್ಕಾರಿ ನೌಕರರು (ಗ್ರೂಪ್ ಡಿ ಹೊರತುಪಡಿಸಿ), ಪ್ರತಿ ತಿಂಗಳಿಗೆ ಹತ್ತು ಸಾವಿರ ರೂ.ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು, ಆದಾಯ ತೆರಿಗೆ ಪಾವತಿದಾರರು, ವೃತ್ತಿಪರರು (ವೈದ್ಯರು, ಅಭಿಯಂತರರು, ವಕೀಲರು ಮತ್ತು ಇತರೆ), ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿದವರು ಈ ಯೋಜನೆಗೆ ಅರ್ಹರಲ್ಲ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT