ಬುಧವಾರ, ಫೆಬ್ರವರಿ 8, 2023
18 °C

ಕಿಶೋರಚಂದ್ ಜೈನ್‍ಗೆ ಶ್ರೇಷ್ಠ ವರ್ತಕ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುರಪುರ: ನಗರದ ಉದ್ಯಮಿ ಮತ್ತು ಗಂಜ್ ವರ್ತಕರ ಸಂಘದ ಅಧ್ಯಕ್ಷ ಕಿಶೋರಚಂದ್ ಸಿ.ಜೈನ್ ಅವರು ಶ್ರೇಷ್ಠ ವರ್ತಕ ಪ್ರಶಸ್ತಿ ಪಡೆದಿದ್ದಾರೆ.

ಶನಿವಾರ ಗದಗನಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮಿ ಸಂಸ್ಥೆ ವತಿಯಿಂದ ಪರಿವರ್ತನ- ಉತ್ತರ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಮ್ಮೇಳನ 2021- 22 ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಪ್ರಶಸ್ತಿ ಪ್ರದಾನ ಮಾಡಿದರು.

ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಸಿ.ಸಿ.ಪಾಟೀಲ, ಹಾಲಪ್ಪ ಆಚಾರ್, ಗದಗ ಶಾಸಕ ಎಚ್.ಕೆ.ಪಾಟೀಲ, ಗದಗ ವಾಣಿಜ್ಯೋದ್ಯಮಿ ಸಂಸ್ಥೆಯ ಕಾರ್ಯದರ್ಶಿ ವೀರೇಶ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು