ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಪ್ರಕ್ರಿಯೆ ತಿಳಿದುಕೊಳ್ಳಿ: ಡಾ.ರಾಗಪ್ರಿಯಾ

ಚುನಾವಣೆ ಯಶಸ್ವಿಗಾಗಿ ತರಬೇತಿ ಅವಶ್ಯ: ಜಿಲ್ಲಾಧಿಕಾರಿ
Last Updated 17 ಡಿಸೆಂಬರ್ 2020, 7:19 IST
ಅಕ್ಷರ ಗಾತ್ರ

ಯಾದಗಿರಿ: ಗ್ರಾಮ ಪಂಚಾಯಿತಿ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಅಧಿಕಾರಿಗಳು ಚುನಾವಣೆ ಪ್ರಕ್ರಿಯೆಯನ್ನು ಸರಿಯಾಗಿ ತಿಳಿದುಕೊಳ್ಳುವುದು ಅತ್ಯವಶ್ಯಕ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್‍ನಲ್ಲಿ ಬುಧವಾರ ನಡೆದ ಚುನಾವಣಾ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯಗಳ ಬಗ್ಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದಲ್ಲಿ ತಿಳಿಸಿದರು.

ವಿಶೇಷ ಮತದಾರರನ್ನು ಗುರುತಿಸಿ ಪ್ರತಿ ಗ್ರಾಮಗಳಲ್ಲಿ ಶೇ 100ರಷ್ಟು ಮತದಾನ ಆಗುವ ಹಾಗೆ ಹೆಚ್ಚಿನ ಪ್ರಮಾಣದಲ್ಲಿ ಗ್ರಾಮ ಮಟ್ಟದಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸೂಕ್ತ ಕ್ರಮವಹಿಸಲು ಮತ್ತು ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸಲು ಸೂಚಿಸಿದರು.

ಜಿಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಮತದಾನ ನಡೆಯುವ ಪೂರ್ವದಿನ ಮತ್ತು ಮತದಾನದಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮವಹಿಸವ ಕುರಿತು ಸಂಬಂದಪಟ್ಟ ಅಧಿಕಾರಿಗಳಿಗೆ
ತಿಳಿಸಿದರು.

ಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT