ಶನಿವಾರ, ಡಿಸೆಂಬರ್ 4, 2021
20 °C

ವಾಹನ ಚಾಲಕಗೆ ಕೋವಿಡ್‌: ಸಚಿವ ಪ್ರಭು ಚವ್ಹಾಣ್ ಕ್ವಾರಂಟೈನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರ ವಾಹನ ಚಾಲಕ ಸಂಜಯ್ ರಾಠೋಡ್ ಅವರಲ್ಲಿ ಕೋವಿಡ್‌ ದೃಢಪಟ್ಟಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಸಚಿವರು ಒಂದು ವಾರದವರೆಗೆ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

ಕ್ವಾರಂಟೈನ್‍ನಲ್ಲಿದ್ದರೂ ನಿರಂತರ ಅಧಿಕಾರಿಗಳ ಸಂಪರ್ಕದಲ್ಲಿದ್ದು, ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಮತ್ತು ಅಭಿವೃದ್ಧಿ ಕೆಲಸಗಳ ಬಗ್ಗೆ ನಿರ್ದೇಶನಗಳನ್ನು ನೀಡುತ್ತಾರೆ. ತೀರಾ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಸಚಿವರ ವಿಶೇಷ ಕರ್ತವ್ಯಾಧಿಕಾರಿ 80733 97831, ಆಪ್ತ ಸಹಾಯಕ ಪ್ರಶಾಂತ 99802 18156, ಜೈಪಾಲ್ 99011 08283 ಅವರನ್ನು ಸಂಪರ್ಕಿಸಬಹುದು. ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ಸಚಿವರೊಂದಿಗೆ ಮಾತನಾಡಬಯಸುವವರು ದಿಲೀಪ್ ಚವ್ಹಾಣ್ 97707 0177 ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಮನವಿ: ಕೊರೊನಾ ಸೋಂಕು ಹರಡುವಿಕೆಯ ನಿಯಂತ್ರಣ ಕುರಿತಂತೆ ಸಾರ್ವಜನಿಕರು ಬೇಜವಾಬ್ದಾರಿ ತೋರುತ್ತಿರುವುದು ಕಂಡುಬರುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು. ತಪ್ಪದೇ ಮಾಸ್ಕ್ ಧರಿಸಬೇಕು. ಆಗಾಗ ಕೈಗಳನ್ನು ಶುಚಿಗೊಳಿಸುವುದು. ಕೆಲಸದ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರುವುದು ಸೇರಿದಂತೆ ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರವು ಕಾಲಕಾಲಕ್ಕೆ ಸೂಚಿಸುವ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.