ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಮತ್ತೆ 4 ಜನರಿಗೆ ಕೋವಿಡ್‌ ದೃಢ

Last Updated 18 ಜುಲೈ 2020, 16:24 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಎರಡು ದಿನಗಳಿಂದ ಕಡಿಮೆ ಪ್ರಮಾಣದಲ್ಲಿ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿದ್ದು, ಶನಿವಾರ ನಾಲ್ಕು ಜನರಲ್ಲಿ ಕೋವಿಡ್‌ ದೃಢವಾಗಿದೆ. ಜಿಲ್ಲೆಯಲ್ಲಿ1,543ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಯಾದಗಿರಿಯ ಮದನಪುರ ಏರಿಯಾದ 24 ವರ್ಷದ ಮಹಿಳೆ, ಕೆಇಬಿ ವಸತಿ ಗೃಹದ 25 ವರ್ಷ ಮಹಿಳೆ, ನಗರದ 29 ಪುರುಷ, ವನಕೇರಿ ಬಡಾವಣೆಯ 40 ವರ್ಷದ ಪುರುಷರಲ್ಲಿ ಕೋವಿಡ್‌ ಪತ್ತೆಯಾಗಿದೆ. ಒಬ್ಬರು ತೆಲಂಗಾಣದಿಂದ ಬಂದಿದ್ದು, ಉಳಿದವರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 3,404 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 5,109 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 131 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದ್ದು, ಇದರಲ್ಲಿ60 ಕಂಟೇನ್ಮೆಂಟ್ ಝೋನ್‍ಗಳನ್ನು ತೆರವುಗೊಳಿಸಲಾಗಿದೆ. ಶನಿವಾರ 282 ಮಾದರಿಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಯಾದಗಿರಿಗಿ ಹೊಸ ಜಿಲ್ಲಾಸ್ಪತ್ರೆಯಿಂದ 23, ಸುರಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 17, ಬಂದಳ್ಳಿ ಏಕಲವ್ಯ ಕೊರೊನಾ ಕೇರ್ ಸೆಂಟರ್‌ನಿಂದ 48 ಜನ ಬಿಡುಗಡೆಯಾಗಿದ್ದು, ಶನಿವಾರ 88 ಜನರು ಮನೆಗೆ ತೆರಳಿದ್ದಾರೆ.ಜಿಲ್ಲೆಯ 1 ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್ ಸೆಂಟರ್‌ಲ್ಲಿ 10 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT