ಯಾದಗಿರಿ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ರಾಜ್ಯ ಸರ್ಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಇದರಿಂದ ಜಿಲ್ಲೆಯಲ್ಲಿ 583 ಶಾಲೆಗಳಿಗೆ ಬೀಗ ಹಾಕಬಹುದು’ ಎಂದು ಎಐಡಿಎಸ್ಒ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ ಆರೋಪಿಸಿದ್ದಾರೆ.

ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿ ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಾಗಿ ಗುರುತಿಸಲಾಗಿದೆ. ಗಣಿಬಾಧಿತ ಜಿಲ್ಲೆಗಳಲ್ಲಿ 100, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500 ಶಾಲೆಗಳು ಸೇರಿವೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ 40,000ಕ್ಕೂ ಹೆಚ್ಚು ಶಾಲೆಗಳು ವಿಲೀನಗೊಳ್ಳುತ್ತವೆ. ಈಗಾಗಲೇ ಶೈಕ್ಷಣಿಕವಾಗಿ ಹಿಂದುಳಿದಿರುವ ಜಿಲ್ಲೆಯ 583 ಶಾಲೆಗಳು ಮುಚ್ಚಲ್ಪಡುತ್ತವೆ. ಇದರಿಂದ ಸಮುದಾಯ, ಹಳ್ಳಿಗಳ ನಡುವಿನ ಶಾಲೆಗಳ ಮಕ್ಕಳು ಪಕ್ಕದೂರಿಗೆ ಹೋಗಬೇಕಾಗುತ್ತದೆ ಎಂದಿದ್ದಾರೆ.

ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೆ ಅಲ್ಲ; ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.