ಶನಿವಾರ, ಸೆಪ್ಟೆಂಬರ್ 18, 2021
26 °C

ಕೃಷ್ಣಾ ನದಿ ಪ್ರವಾಹ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ/ರಾಯಚೂರು: ಎರಡೂ ಜಿಲ್ಲೆಗಳಲ್ಲೂ ಕೃಷ್ಣಾ ನದಿ ಪ್ರವಾಹದ ಅಬ್ಬರ ಭಾನುವಾರ ತುಸು ಇಳಿಕೆಯಾಗಿದೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾನುವಾರ 2.71 ಲಕ್ಷಕ್ಕೂ ಹೆಚ್ಚು ಕ್ಯುಸೆಕ್‌ ನೀರು ಹರಿಯುತ್ತಿದೆ. ಕೊಳ್ಳೂರು (ಎಂ) ಸೇತುವೆ ಇನ್ನೂ ಜಲಾವೃತವಾಗಿದ್ದು, ವಡಗೇರಾ ತಾಲ್ಲೂಕಿನ ಐಕೂರ–ಐಯಾಳ (ಬಿ) ಕಿರು ಸೇತುವೆ ರಸ್ತೆ
ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಇನ್ನೂ ಮುಳುಗಡೆ ಸ್ಥಿತಿಯಲ್ಲಿದೆ. ತುಂಗಭದ್ರಾ ನದಿ ಪ್ರವಾಹ 1.21 ಲಕ್ಷ ಕ್ಯುಸೆಕ್‌ನಿಂದ 51 ಸಾವಿರ ಕ್ಯುಸೆಕ್‌ಗೆ ಕಡಿಮೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು