ಮಂಗಳವಾರ, ಜನವರಿ 19, 2021
23 °C

ಗುರುಮಠಕಲ್: ಆಸ್ತಿಗಾಗಿ ಪತ್ನಿಯ ಕೊಲೆ, ಪತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುರುಮಠಕಲ್ (ಯಾದಗಿರಿ ಜಿಲ್ಲೆ): ಆಸ್ತಿ ಹಂಚಿಕೆಯ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಸೋಮವಾರ ತಡರಾತ್ರಿ ಜರುಗಿದೆ.

ಮೃತರನ್ನು ತಾಲ್ಲೂಕಿನ ಗಾಜರಕೋಟ ಗ್ರಾಮದ ನರಸಮ್ಮ (40) ಎಂದು ಗುರುತಿಸಲಾಗಿದ್ದು, ಆರೋಪಿ ಭೀಮಣ್ಣನನ್ನು (45) ಪೊಲೀಸರು ಬಂಧಿಸಿದ್ದಾರೆ.

ಮೃತ ನರಸಮ್ಮ ಭೀಮಣ್ಣನ ಎರಡನೇ ಪತ್ನಿಯಾಗಿದ್ದು, ಮೊದಲ ಪತ್ನಿ ಮರಣಹೊಂದಿದ ನಂತರ ನರಸಮ್ಮರನ್ನು ಮದುವೆಯಾಗಿದ್ದರು.

ನರಸಮ್ಮ ಹಾಗೂ ಭೀಮಣ್ಣ ಗ್ರಾಮದ ಹೊರವಲಯದಲ್ಲಿ ಮನೆಯಲ್ಲಿದ್ದರು. ಸೋಮವಾರ ರಾತ್ರಿ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಸುವಂತೆ ನರಸಮ್ಮ ಕೇಳಿದ್ದರಿಂದ ಆರಂಭವಾದ ಜಗಳ ಕೊಲೆಯಲ್ಲಿ ಮುಗಿದಿದೆ.

ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ಹಣಮಂತು ಬಂಕಲಗಿ ಆರೋಪಿಯನ್ನು ಬಂಧಿಸಿದ್ದಾರೆ.
ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು