ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ರಾಜೂಗೌಡ

Published 20 ಏಪ್ರಿಲ್ 2024, 16:15 IST
Last Updated 20 ಏಪ್ರಿಲ್ 2024, 16:15 IST
ಅಕ್ಷರ ಗಾತ್ರ

ಸುರಪುರ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದೂ ಇಲ್ಲದಂತಾಗಿದೆ. ಹಾಡು ಹಗಲೆ ವಿದ್ಯಾರ್ಥಿನಿಯ ಕೊಲೆಯಾಗಿರುವುದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ನಿದರ್ಶನ’ ಎಂದು ಬಿಜೆಪಿ ಅಭ್ಯರ್ಥಿ ರಾಜೂಗೌಡ ಟೀಕಿಸಿದರು.

ಕ್ಷೇತ್ರದ ಬೈಲಕುಂಟಿ ಗ್ರಾಮದಲ್ಲಿ ಶನಿವಾರ ಮತಯಾಚನೆ ಮಾಡಿ ಅವರು ಮಾತನಾಡಿದರು.
‘ವಿಶ್ವದಲ್ಲೆ ನೆಚ್ಚಿನ ಆಡಳಿತಗಾರ ಎಂದು ಖ್ಯಾತಿ ಹೊಂದಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸುವುದು. ಪತ್ರಿಕೆಗಳಲ್ಲಿ ಇಲ್ಲ ಸಲ್ಲದ ಜಾಹೀರಾತು ನೀಡುತ್ತಿರುವುದು ಹತಾಶೆಯ ಪರಮಾವಧಿ’ ಎಂದು ಚುಚ್ಚಿದರು.

‘ಬಿಜೆಪಿ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಮತ್ತೆ ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆ ಇದೆ. ಕಾರಣ ಲೋಕಸಭೆಯ ಅಭ್ಯರ್ಥಿ ರಾಜಾ ಅಮರೇಶ್ವರನಾಯಕ ಮತ್ತು ನನ್ನನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು.

‘ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮತ್ತಷ್ಟು ಕೆಲಸಗಳನ್ನು ಮಾಡುತ್ತೇನೆ. ಎರಡು ಬೆಳೆಗೆ ಕಾಲುವೆಗೆ ನೀರು ಬಿಡಿಸುತ್ತೇನೆ. ನಿಮ್ಮೆಲ್ಲರ ಬದುಕು ಹಸನಾಗಿಸುತ್ತೇನೆ’ ಎಂದು ಭರವಸೆ ನೀಡಿದರು.

ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ರಾಜೂಗೌಡ ಅವರ ಮೇಲೆ ಹೂ ಹಾಕಿ ಸ್ವಾಗತಿಸಿದರು. ಮುಖಂಡರಾದ ಎಚ್.ಸಿ. ಪಾಟೀಲ, ವೀರಸಂಗಪ್ಪ ಹಾವೇರಿ, ರಂಗನಾಥ ದೊರೆ ಇತರರು ಹಾಜರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT