ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಹೆಚ್ಚಿಸಿ: ಜಿ.ನಂಜುಂಡಯ್ಯ

ಕಾನೂನು ಅರಿವು– ನೆರವು ಕಾರ್ಯಕ್ರಮ
Last Updated 21 ಜನವರಿ 2023, 6:07 IST
ಅಕ್ಷರ ಗಾತ್ರ

ಯಾದಗಿರಿ: ಮಕ್ಕಳಲ್ಲಿ ಪರಿಸರ ಪ್ರಜ್ಞೆ ಹೆಚ್ಚಿಸಬೇಕು. ಪರಿಸರ ಕಾಳಜಿ ಮತ್ತು ಪ್ರಜ್ಞೆ ಈಗಿನಿಂದಲೇ ಮೂಡಿಸದೇ ಹೋದರೆ ಮುಂದಿನ ದಿನಗಳು ಭಯಾನಕವಾಗಲಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜಿ.ನಂಜುಂಡಯ್ಯ ಹೇಳಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕಾರಗೃಹ ಇಲಾ- ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಸರ್ಕಾರಿ, ಅರೆಸರ್ಕಾರಿ ವಿವಧ ಸಂಘ–ಸಂಸ್ಥೆಗಳು ಸಹಯೋಗದೊಂದಿಗೆ ಶುಕ್ರವಾರ ನಡೆದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು
ಮಾತನಾಡಿದರು.

ಪರಿಸರ ದಿನಾಚರಣೆ ಹೆಸರಿನಲ್ಲಿ ಒಂದು ದಿನ ಗಿಡ ನೆಟ್ಟರೆ ಸಾಲದು. ನಿತ್ಯವೂ ಪರಿಸರ ಪ್ರಜ್ಞೆ ಎಲ್ಲರಲ್ಲೂ ಇರುವಂತಾಗಬೇಕು. ದಿನೆ ದಿನೇ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಪರಿಸರ ಸಂರಕ್ಷಣೆಯ ನಿಷ್ಕಾಳಜಿಯಿಂದ ಪರಿಸರದ ಮೇಲೆ ಮತ್ತು ಪ್ರತಿಯೊಂದು ಜೀವಿಯ ಮೇಲೆ ಅನೇಕ ರೀತಿಯಲ್ಲಿ ದುಷ್ಪರಿಣಾಮಗಳು ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪರಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ. ಅರಣ್ಯದ ಮಹತ್ವ ಅರಿಯಬೇಕು. ನಾವು ಜೀವಿಸುವ ವಾತಾವರಣದಲ್ಲಿ ಆಮ್ಲಜನಕ ಪ್ರಮಾಣ ಕಡಿಮೆ ಆಗುತ್ತಿರುವುದರಿಂದ ಅನೇಕ ರೋಗಗಳು ಹುಟ್ಟಿಕೊಳ್ಳುತ್ತಿವೆ ಎಂದು ಕಳವಳ
ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಕಾನೂನು ಬಗ್ಗೆಯೂ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಿ ಮುಂದೆ ನ್ಯಾಯಾಧೀಶರಾಗಬೇಕು. ವಿದ್ಯೆ ಯಾರು ಕಳ್ಳತನ ಮಾಡುವ ವಸ್ತು ಅಲ್ಲ. ಕಾರಣ ಎಲ್ಲರೂ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಸಾಹೀಲ್ ಅಹ್ಮದ್ ಎಸ್. ಕುನ್ನಿಬಾವಿ ಮಾತನಾಡಿ, ಪ್ರತಿಯೊಬ್ಬರಿಗೂ ದೈನಂದಿನ ಜೀವನಕ್ಕೆ ಅನ್ವಯವಾಗುವ ಸಾಮಾನ್ಯ ಕಾನೂನು ಕುರಿತು ಮಾಹಿತಿ, ಅರಿವು ಇರಲೇಬೇಕು. ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಹಾಗೂ ಆಸ್ತಿ ಮಾರಾಟ, ಖರೀದಿ, ಜನನ, ಮರಣ ಕುರಿತು ಕನಿಷ್ಠ ಕಾನೂನಿನ ತಿಳಿವಳಿಕೆ ಇರಬೇಕು. ವಿದ್ಯಾರ್ಥಿ ಜೀವನದಲ್ಲಿ ಹೆಚ್ಚಿನ ಸಮಯ ವಿದ್ಯಾಭ್ಯಾಸಕ್ಕೆ ನೀಡಬೇಕು. ಉತ್ತಮ ಶಿಕ್ಷಣ ಪಡೆದು ಮಾದರಿಯ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಸರ್ವೋದಯ ಎಸ್.ಎಚ್. ಅಧ್ಯಕ್ಷತೆ ವಹಿಸಿದರು.

ಐ.ಎಫ್.ಎಸ್ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಎ. ಪಾಟೀಲ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಅಸದ್, ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಸಿ.ಎಸ್.ಮಾಲಿಪಾಟೀಲ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತ ಕರಡಿ, ಶ್ರೀನಿವಾಸ ದೊಡ್ಮನಿ ಇದ್ದರು.

ಇದೇ ವೇಳೆ ವಕೀಲ ಅಬ್ದುಲ್ ರಜಾಕ್ ಅವರು 50 ಸಸಿಗಳನು ದೇಣಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT