ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ಪರ್ಶ ಕುಷ್ಠ ರೋಗ ಅರಿವು ಆಂದೋಲನಕ್ಕೆ ಚಾಲನೆ

Published 31 ಜನವರಿ 2024, 14:24 IST
Last Updated 31 ಜನವರಿ 2024, 14:24 IST
ಅಕ್ಷರ ಗಾತ್ರ

ಸುರಪುರ: ಇಲ್ಲಿಯ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಬುಧವಾರ ಸ್ಪರ್ಶ ಕುಷ್ಠ ಅರಿವು ಆಂದೋಲನ ಕಾರ್ಯಕ್ರಮಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪನಾಯಕ ಚಾಲನೆ ನೀಡಿದರು.

‘ತಾಲ್ಲೂಕಿನಲ್ಲಿ ಜ.30ರಿಂದ ಫೆಬ್ರುವರಿ 13ರ ವರೆಗೆ ಪಾಕ್ಷಿಕ ಸ್ಪರ್ಶ ಕುಷ್ಠ ರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ನಗರದ ಎಲ್ಲಾ ವಾರ್ಡ್‌ಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಕುಷ್ಠ ರೋಗದ ಅಭಿಯಾನ ನಡೆಯಲಿದೆ. ಕುಷ್ಠರೋಗ ನಿಯಂತ್ರಣಕ್ಕೆ ಸಹಭಾಗಿತ್ವದ ಅಗತ್ಯವಿದೆ’ ಎಂದು ಹೇಳಿದರು.

‘ಚರ್ಮದ ಮೇಲಿನ ಯಾವುದೇ ಗಂಟುಗಳು, ಕಣ್ಣಿನ ರೆಪ್ಪೆಗಳು ಮುಚ್ಚುವಲ್ಲಿ ತೊಂದರೆ, ಕೈ ಅಥವಾ ಕಾಲುಗಳಲ್ಲಿ ಬಹು ದಿನದ ಗಾಯ, ಬೆರಳುಗಳು ಮಡಿಚಿಕೊಂಡಿರುವುದು, ಜುಮ್ಮು ಎನಿಸುವಿಕೆ, ಮರಗಟ್ಟುವಿಕೆ, ನಡೆಯುವಾಗ ಕಾಲು ಎಳೆಯುವುದು, ಬಲಹೀನತೆ ಇವುಗಳು ಕುಷ್ಠ ರೋಗದ ಲಕ್ಷಣಗಳಾಗಿವೆ’ ಎಂದು ವಿವರಿಸಿದರು.

‘ಸಮಾಜದಲ್ಲಿ ಈ ರೋಗದ ಬಗ್ಗೆ ಬಹಳ ಕೀಳರಿಮೆ ಇರುತ್ತದೆ. ಆರೋಗ್ಯ ಇಲಾಖೆಯಿಂದ ಈ ರೋಗದ ಬಗ್ಗೆ ಜಾಗೃತಿ ಮೂಡಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ರೋಗ ಲಕ್ಷಣಗಳು ಕಂಡ ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆದುಕೊಂಡರೆ ರೋಗಿಗಳು ಸಂಪೂರ್ಣ ಗುಣಮುಖರಾಗಬಹುದು’ ಎಂದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯಾ ಕೆ. ಪವಾರ್, ರಾಜಶೇಖರ, ಬಿಎಚ್‍ಇಒ ಮಲ್ಲಪ್ಪ ಇದ್ದರು. ಸುರೇಶ ಅವರು ಸ್ಪರ್ಶ ಕುಷ್ಠ ರೋಗದ ಅರಿವು ಆಂದೋಲನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT