ಶಹಾಪುರ: ‘ಶಿಕ್ಷಣದ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಬೇಕಿದೆ. ಗ್ರಾಮೀಣ ಪ್ರದೇಶದ ಪ್ರತಿ ಮಗು ಅಕ್ಷರದ ಬೆಳಕಿನ ಕಡೆ ಸಾಗಬೇಕು’ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಸಲಹೆ ನೀಡಿದರು.

ತಾಲ್ಲೂಕಿನ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪಾಲಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಇನ್ನು ಹೆಚ್ಚಿನ ಅನುದಾನ ಒದಗಿಸಬೇಕಿದೆ’ ಎಂದರು.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾದ ಸಗರ ಶಾಲೆಯ ನವೀದ್ ಅಂಜುಮ್, ಶಿರವಾಳ ಶಾಲೆಯ ಅನುಪಮಾ, ಬೂದನೂರ ಶಾಲೆಯ ರಾಮಚಂದ್ರ ಬಿರಾದಾರ ಅವರನ್ನು ಸನ್ಮಾನಿಸಲಾಯಿತು.

ಜಿ.ಪಂ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಣಮಂತರಾಯ ದೊರೆ ದಳಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ, ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಯಪ್ಪ ಹುಡೇದ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಂಪನಗೌಡ ಪಾಟೀಲ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೀಮಣ್ಣಗೌಡ ತಳೆವಾಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.