ಬುಧವಾರ, ಜನವರಿ 22, 2020
28 °C

ಮಕ್ಕಳ ಸಾಹಿತಿ ಚಂದ್ರಕಾಂತ ಕರದಳ್ಳಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಯಾದಗಿರಿ: ಮಕ್ಕಳ ಸಾಹಿತಿ ಹಾಗೂ ಕನ್ನಡ ರಾಜ್ಯೋತ್ಸವ ಪುರಸ್ಕೃತ ಚಂದ್ರಕಾಂತ ಕರದಳ್ಳಿ (67) ಬೆಂಗಳೂರಿನಲ್ಲಿ ಗುರುವಾರ ನಿಧನರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನವರಾದ ಕರದಳ್ಳಿ ಕಾವ್ಯ ಕತೆ, ಕಾದಂಬರಿ, ಶಿಶುಪ್ರಾಸ , ಒಗಟು, ಪ್ರವಾಸ ಕಥನ ಸೇರಿ 50ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. 

2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಅಲ್ಲದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. 

ಗುರುವಾರ ಬೆಳಿಗ್ಗೆ 9.30 ರ ಸುಮಾರಿಗೆ ಸಚಿವ ಸುರೇಶಕುಮಾರ ಅವರನ್ನು ಭೇಟಿ ಮಾಡಿದ ನಂತರ ಎದೆನೋವು ಕಾಣಿಸಿಕೊಂಡು ಹಠಾತ್‌ ನಿಧರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳನ್ನು ಆಗಲಿದ್ದಾರೆ. 

ಕಲ್ಯಾಣ ಕರ್ನಾಟಕದ ಬಾಲ ಸಾಹಿತ್ಯ ಲೇಖಕ ಕರದಳ್ಳಿ ನಿಧನದಿಂದ ಸಾಹಿತ್ಯ ಲೋಕ ಬಡವಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು