ಸೋಮವಾರ, ಡಿಸೆಂಬರ್ 5, 2022
21 °C
ಪಂಚಾಯತ್‌ ರಾಜ್ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಕ್ಷೇತ್ರ ಭೇಟಿ

ಗ್ರಾಮೀಣ ನೈರ್ಮಲ್ಯಕ್ಕೆ ಆದ್ಯತೆ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಲು ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣ ಜನರಲ್ಲಿ ಕುಡಿಯುವ ನೀರಿನಿಂದ ಹರಡುವ ಕಾಯಿಲೆಗಳನ್ನು ತಡೆಯಲು, ಜನರಿಗೆ ಪೂರೈಕೆ ಮಾಡುವ ಕುಡಿಯುವ ನೀರಿನ ಶುದ್ಧತೆ ಪಿಎಚ್ ಪ್ರಮಾಣ ಕುರಿತು ಪರೀಕ್ಷೆ ಮಾಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಅಶೋಕ ನಗರ ತಾಂಡಾ, ಎಂ.ಹೊಸಳ್ಳಿ, ಅರಕೇರಾ (ಕೆ) ಹಾಗೂ ಬೆಟ್ಟದಳ್ಳಿ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್, ಸ್ವಚ್ಛ ಭಾರತ ಮಿಷನ್, ಮಹಾತ್ಮ ಗಾಂಧಿ ನರೇಗಾ ಯೋಜನೆ ಹಾಗೂ ಇತರೆ ಯೋಜನೆಗಳಡಿ ಅನುಷ್ಠಾನಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಅನುಷ್ಠಾನಗೊಂಡ ಹರ್ ಘರ್ ಜಲ್ ಕಾಮಗಾರಿ ಮೂಲಕ ಅನುಷ್ಠಾನ ಮಾಡಿದ ಕಾಮಗಾರಿಗಳಲ್ಲಿ ಮನೆ ಮನೆಗೂ ಕುಡಿಯುವ ನೀರು ಕೊಡಲು ಅಳವಡಿಸಿದ ನಲ್ಲಿಗಳಲ್ಲಿ ಜನರು ಬಳಕೆ ಮಾಡದ ನಲ್ಲಿಗಳನ್ನು ಲಾಕ್ ಮಾಡಿ, ಸಂಬಂಧಿಸಿದ ಪಿಡಿಒಗಳು ನಲ್ಲಿಗಳ ಕೀಲಿ ತಮ್ಮ ಹತ್ತಿರ ಇಟ್ಟುಕೊಳ್ಳಬೇಕು ಎಂದರು.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ರೈತರಿಗೆ ಜೀವಿತಾವಧಿಯಲ್ಲಿ ₹2.50 ಲಕ್ಷವರೆಗೆ ವೈಯಕ್ತಿಕ ಕಾಮಗಾರಿ ನೀಡಿ ಹಾಗೂ ಭೂರಹಿತ ಕೃಷಿ ಕೂಲಿ ಕಾರ್ಮಿಕರ ಪ್ರತಿ ಕುಟುಂಬಕ್ಕೂ ವರ್ಷದಲ್ಲಿ ನೂರು ದಿನ ಅಕುಶಲ ಕೂಲಿ ಕೆಲಸ ನೀಡುವ ಮೂಲಕ ಸ್ವಾಭಿಮಾನದ ಜೀವನಕ್ಕೆ ಹಾಗೂ ಆರ್ಥಿಕ ಪ್ರಗತಿಗೆ ಪೂರಕವಾಗುವಂತೆ ಕೆಲಸ ಮಾಡಿ ಎಂದು ಹೇಳಿದರು.

ಗುರುಮಠಕಲ್ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮದ ರೈತ ಮಹಾತ್ಮ ಗಾಂಧಿ ನರೇಗಾ ಯೋಜನೆ ಒಗ್ಗೂಡಿಕೆ ಕಾಮಗಾರಿಗಳಡಿ ತೋಟಗಾರಿಕೆ ಇಲಾಖೆಯಿಂದ ತನ್ನ ಎರಡೂವರೆ ಎಕರೆ ಭೂಮಿಯಲ್ಲಿ ಬೆಳೆದ ಪಪ್ಪಾಯ ಬೆಳೆಯನ್ನು ವೀಕ್ಷಿಸಿದ ಅವರು, ಪಪ್ಪಾಯ ಬೆಳೆ
ಬೆಳೆದ ರೈತನೊಂದಿಗೆ ಸಂವಾದ ಮಾಡುವ ಮೂಲಕ ರೈತನ ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಆರ್ ನಾಯ್ಕ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವೆಂಕಟೇಶ ಬಿ.ಚಟ್ನಳ್ಳಿ, ಯಾದಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಖಾಲಿದ್ ಅಹ್ಮದ್, ಎಡಿಪಿಸಿ ಬನ್ನಪ್ಪ ಬೈಟಪಲ್ಲಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಂತೋಷ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಅಜೀಮುದ್ದೀನ್, ವಲಯ ಅರಣ್ಯ ಅಧಿಕಾರಿ ಸೋಮರಾಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಪಿಡಿಒಗಳು, ತಾಂತ್ರಿಕ ಸಂಯೋಜಕರು ಸೇರಿ ಇತರರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.