ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

7
ಕೆಂಭಾವಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ

ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

Published:
Updated:
Deccan Herald

ಕೆಂಭಾವಿ: ಪಟ್ಟಣದ ಸಮರ್ಪಕ ಕುಡಿಯುವ ನೀರಿನ ಸಮಸ್ಯೆ ಶಾಶ್ವತ ಪರಿಹಾರ ಕೈಗೊಳ್ಳಲು ಶಾಸಕ ಶರಣಬಸಪ್ಪ ದರ್ಶನಾಪುರ ಅವರ ಸೂಚನೆ ಮೇರೆಗೆ ಮಂಗಳವಾರ ಪಟ್ಟಣಕ್ಕೆ ಕಲಬುರ್ಗಿ ವಲಯದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಎಂಜಿನಿಯರ್ ಎಸ್.ಎನ್.ದಿನೇಶ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ನಾರಾಯಣಪುರ ಎಡದಂಡೆ ಮುಖ್ಯ ಕಾಲುವ ಸಮೀಪದಲ್ಲಿ ಇರುವ ಸರ್ಕಾರಿ ಜಾಗದಲ್ಲಿ ಟ್ರಿಟ್‌ಮೆಂಟ್‌ ಪ್ಲಾಂಟ್‌ ಅನ್ನು ನಿರ್ಮಾಣ ಮಾಡಿ ಪಟ್ಟಣದಲ್ಲಿರುವ ಈಗಾಗಲೇ ಇರುವ ಕುಡಿಯುವ ನೀರಿನ ಟ್ಯಾಂಕ್‍ಗಳಿಗೆ ಪೂರೈಕೆ ಮಾಡಲು ಕ್ರಿಯಾ ಯೋಜನೆಯನ್ನು ರೂಪಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನಗರೋತ್ಥಾನ ಯೋಜನೆಯ 3ನೇ ಹಂತದಲ್ಲಿ ₹4.33 ಕೋಟಿ ಕೋಟಿ ಅನುದಾನ ಬಿಡುಗಡೆಯಾಗಿದ್ದು, 2019ರ ಫೆಬ್ರವರಿ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

2031ರ ಜನಸಂಖ್ಯೆಗೆ ಅನುಗುಣವಾಗಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಸಲುವಾಗಿ ಕೃಷ್ಣಾ ಕಾಲುವೆ ನೀರನ್ನು ಬಳಸಿಕೊಂಡು ಶಾಶ್ವತ ಶುದ್ಧ ಕುಡಿಯುವ ನೀರಿನ ಯೋಜನೆ ರೂಪಿಸುವಂತೆ ಶಾಸಕರು ಸೂಚಿಸಿದ್ದಾರೆ. ಈ ಸಂಬಂಧ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿ ಜಮೀನು ವಶಕ್ಕೆ ಪಡೆದು ಹಾಗೂ ಮತ್ತು ಖಾಸಗಿ ಜಮೀನುಗಳನ್ನು ಖರೀದಿಸಿ ದೊಡ್ಡ ಕೆರೆ ನಿರ್ಮಾಣ ಮಾಡಿ ಪಟ್ಟಣಕ್ಕೆ ಶಾಶ್ವತ ನೀರಿನ ವ್ಯವಸ್ಥೆ ಮಾಡಲು ಕ್ರಿಯಾ ಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯನಿರ್ವಾಹಕ ಎಂಜಿನಿಯರ್‌ ಎಚ್.ಸಿ.ಸುಬ್ರಮಣ್ಯಂ, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಮಲ್ಲಿಕಾರ್ಜುನ ಬಿರಾದಾರ, ಸಹಾಯಕ ಎಂಜಿನಿಯರ್‌ ಗಳಾದ ಶಂಕರಗೌಡ ಪಾಟೀಲ, ರಾಜಕುಮಾರ, ಪುರಸಭೆ ಅಧ್ಯಕ್ಷ ದೇವಪ್ಪ ಮ್ಯಾಗೇರಿ, ಮುಖ್ಯಾಧಿಕಾರಿ ಚಂದ್ರಶೇಖರ ಮೇಟಿ, ಸಂಜೀವರಾವ್ ಕುಲಕರ್ಣಿ ಇದ್ದರು.

 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !