ಯಾದಗಿರಿ: ‘ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸೆಪ್ಟೆಂಬರ್ 13ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುವುದು’ ಎಂದು ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್.ಜೆ. ತಿಳಿಸಿದರು.

‘ರಾಜಿ ಸಂಧಾನದ ಮೂಲಕ ಇತ್ಯರ್ಥ ಆಗುವಂತಹ ಪ್ರಕರಣಗಳನ್ನು ಜನತಾ ನ್ಯಾಯಾಲಯದಲ್ಲಿ ಉಭಯ ಪಕ್ಷಗಾರರ ಸಮ್ಮುಖದಲ್ಲಿ ಪರಿಹರವನ್ನು ಕಂಡುಕೊಳ್ಳಬಹುದು. ಯಾವುದೇ ವಕೀಲರು ಇಲ್ಲದೆಯೂ ಎರಡೂ ಪಕ್ಷಗಳು ಪಾಲ್ಗೊಳ್ಳಬಹುದು. ಇದರಿಂದ ಸಮಯ, ಹಣವೂ ಉಳಿತಾಯ ಆಗಲಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಅದಾಲತ್ನಲ್ಲಿ ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಗ್ರಾಹಕ ವೇದಿಕೆಯಲ್ಲಿನ ವ್ಯಾಜ್ಯಗಳು, ವೇತನ ಭತ್ಯೆ, ಕೈಗಾರಿಕಾ ಕಾರ್ಮಿಕ ವೇತನ, ವೈವಾಹಿಕ, ಕೌಟುಂಬಿಕ, ಚೆಕ್ ಅಮಾನ್ಯ, ಸಾಲ ವಸೂಲಾತಿ, ಬ್ಯಾಂಕ್ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು’ ಎಂದು ಮಾಹಿತಿ ನೀಡಿದರು.

‘ಸಣ್ಣ ಪುಟ್ಟ ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾದರೆ ನ್ಯಾಯಾಲಯಗಳ ಮೇಲಿನ ಹೊರೆ ಕಡಿಮೆಯಾಗುತ್ತದೆ. ಇತರೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಸಹಕಾರಿಯಾಗುತ್ತದೆ. ಹೀಗಾಗಿ, ಪ್ರಕರಣ ದಾಖಲಿಸಿದವರು ಮುಂದೆ ಬಂದು ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳಬೇಕು. ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುವುದು’ ಎಂದರು.

‘ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾದರೇ ಮಾತ್ರ ಪ್ರಕರಣ ತೀರ್ಮಾನ ಆಗಲಿದೆ. ವ್ಯಾಜ್ಯಗಳ ಇತ್ಯರ್ಥದಿಂದ ಬಾಂಧವ್ಯ ವೃದ್ಧಿಯಾಗುತ್ತದೆ’ ಎಂದು ಹೇಳಿದರು.

ಮಾಹಿತಿಗೆ ಮೊಬೈಲ್ ಸಂಖ್ಯೆ 9141193924ಗೆ ಸಂಪರ್ಕಿಸಬಹುದು.

ರಾಜಿ ಆಗಬಹುದಾದ ಪ್ರಕರಣಗಳನ್ನು ಇತ್ಯರ್ಥಿಸಲು ತರಬೇತಿ ಪಡೆದ ವಕೀಲರ ನೇತೃತ್ವದಲ್ಲಿ ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ–90 ವಿಶೇಷ ಅಭಿಯಾನ ನಡೆಸಲಾಗುತ್ತಿದೆ
ಮರಿಯಪ್ಪ ಹಿರಿಯ ಸಿವಿಲ್ ನ್ಯಾಯಾಧೀಶ

'ಹೊಸ ಕಟ್ಟಡದಲ್ಲಿ ಕಾರ್ಯಕಲಾಪ ಆರಂಭ’:

‘ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿನ ಹೊಸ ಕಟ್ಟಡದಲ್ಲಿ ನ್ಯಾಯಾಲಯದ ಕಾರ್ಯಕಲಾಪಗಳು ಕಳೆದ ಎರಡು ದಿನಗಳಿಂದ ನಡೆಯುತ್ತಿವೆ. ಹೊಸ ಕಟ್ಟಡದ ಅಧಿಕೃತ ಉದ್ಘಾಟನೆಯು ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಎಚ್.ಜೆ. ಹೇಳಿದರು. ‘1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಕಾನೂನು ಸೇವಾ ಪ್ರಾಧಿಕಾರ ಸೇರಿ ಐದು ನ್ಯಾಯಾಲಯಗಳ ಕಾರ್ಯಕಲಾಪಗಳು ನಡೆಯುತ್ತಿವೆ. ಇನ್ನೂ ಮೂರು ನ್ಯಾಯಾಲಯಗಳು ನಡೆಯುವಷ್ಟು ಸ್ಥಳವಕಾಶವಿದೆ. ಎಸ್ಸಿ–ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯ ವಿಶೇಷ (ಸೆಷನ್ಸ್) ಕೋರ್ಟ್ ಪೋಕ್ಸೊ ಕೋರ್ಟ್ ಸಹ ಮಂಜೂರಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.