ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಂಡಾಗಳಲ್ಲಿ ಪಿ.ರಾಜೀವ್ ಮತಯಾಚನೆ

Published 15 ಏಪ್ರಿಲ್ 2024, 16:18 IST
Last Updated 15 ಏಪ್ರಿಲ್ 2024, 16:18 IST
ಅಕ್ಷರ ಗಾತ್ರ

ನಾರಾಯಣಪುರ: ರಾಯಚೂರು ಲೋಕಸಭಾ ಹಾಗೂ ಸುರಪುರ ವಿಧಾನಸಭಾ ಉಪಚುನಾವಣೆ ಪ್ರಯುಕ್ತ ಸೋಮವಾರ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಸುರಪುರ ಮತಕ್ಷೇತ್ರ ವ್ಯಾಪ್ತಿಯ ವಿವಿಧ ತಾಂಡಾಗಳಿಗೆ ತೆರಳಿ  ಮತಯಾಚಿಸಿದರು.

ಹನುಮನಗರದಲ್ಲಿ (ಐಬಿ ತಾಂಡಾ) ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ದೇಶದ ಸಮಗ್ರ ಅಭಿವೃದ್ಧಿಗಾಗಿ, ಬಂಜಾರ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಬಂಜಾರ ಸಮುದಾಯದ ಏಳ್ಗೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಈ ಹಿಂದೆ ಇದ್ದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿ ಹಕ್ಕು ಪತ್ರ ವಿತರಿಸಿದ್ದಾರೆ. ಬಂಜಾರ ನಿಗಮಕ್ಕೆ ಹೆಚ್ಚಿನ ಅನುದಾನ ಒದಗಿಸುವಲ್ಲಿ ಬಿಜೆಪಿ ಕೊಡುಗೆ ಅಪಾರ. ಹೀಗಾಗಿ ಸುರಪುರ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ, ಬಿಜೆಪಿ ಅಭ್ಯರ್ಥಿ ನರಸಿಂಹನಾಯಕ (ರಾಜುಗೌಡ) ಮತ್ತು ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ತಿ ರಾಜಾ ಅಮರೇಶ್ವರನಾಯಕ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ರಾಜಾ ಜಿತೇಂದ್ರನಾಯಕ ಜಹಗೀರದಾರ, ಯುವ ಮುಖಂಡ ಹನುಮಂತ ನಾಯಕ (ಬಬ್ಲುಗೌಡ), ರಾಜಾ ಕುಶಾಲನಾಯಕ ಜಹಗೀರದಾರ ಸೇರಿದಂತೆ ಆಯಾ ತಾಂಡಾಗಳ ಸ್ಥಳೀಯ ಬಂಜಾರ ಸಮುದಾಯದ ಪ್ರಮುಖರು, ಬಿಜೆಪಿ ಮುಖಂಡರು, ಯುವಕರು, ಮಹಿಳೆಯರು ಉಪಸ್ಥಿತರಿದ್ದರು.

ನಾರಾಯಣಪುರ ಸಮೀಪದ ಹನುಮನಗರದಲ್ಲಿ(ಐಬಿ ತಾಂಡಾ) ಬಿಜೆಪಿ ಅಭ್ಯರ್ಥಿಗಳ ಪರ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮತಯಾಚಿಸಿದರು. ಮುಖಂಡರು ಹಾಜರಿದ್ದರು
ನಾರಾಯಣಪುರ ಸಮೀಪದ ಹನುಮನಗರದಲ್ಲಿ(ಐಬಿ ತಾಂಡಾ) ಬಿಜೆಪಿ ಅಭ್ಯರ್ಥಿಗಳ ಪರ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮತಯಾಚಿಸಿದರು. ಮುಖಂಡರು ಹಾಜರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT