ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸಗಿ: ಮತಗಟ್ಟೆ, ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಭೇಟಿ

Published 19 ಮಾರ್ಚ್ 2024, 15:52 IST
Last Updated 19 ಮಾರ್ಚ್ 2024, 15:52 IST
ಅಕ್ಷರ ಗಾತ್ರ

ಹುಣಸಗಿ: ಲೋಕಸಭೆ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಳನೂರು ಗ್ರಾಮದ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ಯಾವುದೇ ಕಾರಣಕ್ಕೂ ವಾಹನಗಳನ್ನು ತಪಾಸಣೆ ಮಾಡದೆ ಹಾಗೆ ಬಿಡಬೇಡಿ. ಯಾವುದೇ ಅಧಿಕಾರಿಗಳು ಸೇರಿದಂತೆ ಯಾರೇ ಇದ್ದರು ಅವರ ವಾಹನವನ್ನು ಕಡ್ಡಾಯವಾಗಿ ತಪಾಸಣೆ ಮಾಡಿ ಕಟ್ಟೆಚ್ಚರ ವಹಿಸಬೇಕು’ ಎಂದು ಸೂಚನೆ ನೀಡಿದರು.

ತಾಲ್ಲೂಕಿನ ಕೊಡೇಕಲ್ಲ, ಗೆದ್ದಲಮರಿ, ಬೈಲಕುಂಟಿ, ನಾರಾಯಣಪುರ ಸೇರಿದಂತೆ ಇತರ ಗ್ರಾಮಗಳ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳನ್ನು ಹೊಂದಿರುವ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಲ ಗ್ರಾಮಗಳ ಮತಗಟ್ಟೆಗಳಲ್ಲಿ ಕಿಟಕಿ, ಬಾಗಿಲು, ಶೌಚಾಲಯ, ವಿದ್ಯುತ್ ಸಂಪರ್ಕ ಇಲ್ಲದಿರುವದನ್ನು ಗಮನಿಸಿ ‘ಒಂದು ದಿನದಲ್ಲಿ ಕೆಲಸ‌ ಪೂರ್ಣಗೊಳಿಸಿ ವರದಿ ನೀಡಬೇಕಿ. ಎಲ್ಲ ಮತಗಟ್ಟೆಗಳಲ್ಲಿ ಮೂಲ ಸೌಲಭ್ಯಗಳು ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಕುರಿತಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕಿನ ಮಾರನಾಳ ಚೆಕ್‌ಪೋಸ್ಟ್‌ ಬಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆಲಸಕ್ಕೆ ಹಾಜರ್ ಇಲ್ಲದಿರುವುದರಿಂದ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಹಶೀಲ್ದಾರ್ ಬಸಲಿಂಗಪ್ಪ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಯ್ಯಸ್ವಾಮಿ ಹಿರೇಮಠ, ಹುಣಸಗಿ ಸರ್ಕಲ್ ಇನ್ಸ್‌ಪೆಕ್ಟರ್ ಸಚಿನ್, ಕಂದಾಯ ನಿರೀಕ್ಷಕ ರವಿಕುಮಾರ್, ಕಲ್ಲಪ್ಪ ಜಂಜಿನ ಗಡ್ಡಿ, ಹಾಗೂ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

ಹುಣಸಗಿ ತಾಲ್ಲೂಕಿನ ಮಾಳನೂರು ಗ್ರಾಮದ ಗಡಿಭಾಗದಲ್ಲಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಡಾ. ಸುಶೀಲಾ. ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಹುಣಸಗಿ ತಾಲ್ಲೂಕಿನ ಮಾಳನೂರು ಗ್ರಾಮದ ಗಡಿಭಾಗದಲ್ಲಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಡಾ. ಸುಶೀಲಾ. ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT