ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ಲೋಕಸಭೆ, ಸುರಪುರ ಉಪ ಚುನಾವಣೆ ಮತದಾನ ಬಿರುಸು

Published 7 ಮೇ 2024, 3:03 IST
Last Updated 7 ಮೇ 2024, 3:03 IST
ಅಕ್ಷರ ಗಾತ್ರ

ಯಾದಗಿರಿ: ರಾಯಚೂರು ಲೋಕಸಭೆ ಚುನಾವಣೆ‍, ಸುರಪುರ ಉಪ ಚುನಾವಣೆ ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಆರಂಭವಾಯಿತು.

ಬಿಸಿಲಿನ ಪ್ರಖರತೆ ನಡೆಯುವೆಯೂ ಅಲ್ಲಲ್ಲಿ ಮತದಾರರು ಮತಗಟ್ಟೆಗೆ ಆಗಮಿಸುತ್ತಿದ್ದಾರೆ. ಶಾಮಿಯಾನ ವ್ಯವಸ್ಥೆ ಮಾಡಲಾಗಿದೆ. ಸುರಪುರದ ನಗರಸಭೆ ಮತಗಟ್ಟೆಯಲ್ಲಿ 10 ನಿಮಿಷ ತಡವಾಗಿ ಮತದಾನ ಆರಂಭವಾಯಿತು.

ಸುರಪುರ ಉಪ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ್ ನಾಯಕ ನಗರದ ಗ್ರಂಥಾಲಯ ಮತಗಟ್ಟೆಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.

ಸುರಪುರ ತಾಲ್ಲೂಕಿನ ಕಕ್ಕೇರಾ ಪಟ್ಟಣದ ಬೂತ್ ನಂ 255ರ ಮಲ್ಲಿಕಾರ್ಜುನ ದೊಡ್ಡಿಯಲ್ಲಿ ಮತದಾನ ಸ್ಥಗಿತಗೊಂಡಿದೆ. ಪ್ರಸ್ತುತ 2 ಮತಗಳು ಮಾತ್ರ ಮತದಾನವಾಗಿವೆ.

ಬೂತ್ ಸಮೀಪ ವ್ಯಕ್ತಿಯೊಬ್ಬರು ನಿಧನ ಹೊಂದಿದ ಪ್ರಯುಕ್ತ ಮತದಾನ ಸ್ಥಗಿತಗೊಂಡಿದೆ. ಸ್ವಲ್ಪ ಸಮಯದ ನಂತರ ಮತದಾನ ಮಾಡುತ್ತೇವೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ ಎಂದು ಕಂದಾಯ ಮೂಲಗಳು ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ಜರುಗಿಲ್ಲ. ಶಹಾಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಸುಗಮವಾಗಿ ನಡೆದಿದೆ. ಗ್ರಾಮೀಣ ಪ್ರದೇಶದಲ್ಲಿ ನಿರುತ್ಸಾಹ ಕಂಡು ಬರುತ್ತಿದೆ.

ತಾಲ್ಲೂಕಿನ ವನದುರ್ಗ ಗ್ರಾಮದಲ್ಲಿ ಬೆಳಿಗ್ಗೆ 8 ಗಂಟೆಯಾದರೂ ಮತದಾನ ಕೇಂದ್ರ ಬಳಿ ಮತದಾರರು ಸುಳಿಯಲಿಲ್ಲ.

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಕಂದಕೂರ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯ 110 ಮತಗಟ್ಟೆ ಕೇಂದ್ರದಲ್ಲಿ ಮತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT