ಎರಡು ಜಿಲ್ಲೆಯಲ್ಲೂ ದೋ ಆಬ್ ಪ್ರದೇಶ
ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಮೂರು ನದಿಗಳು ಹರಿಯುತ್ತಿದ್ದರೂ ಸಮಪರ್ಕವಾಗಿ ನೀರಾವರಿ ಸೌಲಭ್ಯ ಇಲ್ಲದಂತೆ ಆಗಿದೆ. ರಾಯಚೂರು ಜಿಲ್ಲೆಯಲ್ಲಿ ಕೃಷ್ಣ ತುಂಗಭದ್ರಾ ನದಿ (ಎರಡು ನದಿಗಳು) ಹರಿಯುತ್ತಿದೆ. ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣಾ ಭೀಮಾ ನದಿ ಹರಿಯುತ್ತಿದೆ. ಆದರೂ ಕೇಂದ್ರ ಸರ್ಕಾರದ ನೀತಿ ಆಯೋಗದ ಮಹಾತ್ವಕಾಂಕ್ಷಿ ಜಿಲ್ಲೆಗಳೆಂದು ರಾಜ್ಯದಲ್ಲಿ ಗುರುತಿಸಿಕೊಂಡಿದೆ. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಎರಡು ಜಿಲ್ಲೆಗಳಿಗೆ ಸಿಗಬೇಕಾದ ಅನುದಾನ ಸಮರ್ಪಕವಾಗಿ ಸಿಗುತ್ತಿಲ್ಲ ಎಂದು ಸಾರ್ವಜನಿಕರ ಆರೋಪವಾಗಿದೆ.