ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ | ಹುಚ್ಚುನಾಯಿ ಕಡಿತ: 9 ಜನರಿಗೆ ಗಾಯ

Published 10 ಡಿಸೆಂಬರ್ 2023, 16:11 IST
Last Updated 10 ಡಿಸೆಂಬರ್ 2023, 16:11 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ಕೊಂಗಂಡಿ ಗ್ರಾಮದಲ್ಲಿ ಭಾನುವಾರ ಹುಚ್ಚು ನಾಯಿ ಕಡಿದು 9 ಜನ, ದನಕರುಗಳು ಗಾಯಗೊಂಡಿವೆ. ಇದರಿಂದ ಗ್ರಾಮದಲ್ಲಿ ಜನರು ಭಯಭೀತರಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರು.

ಹುಚ್ಚ ನಾಯಿಯಿಂದ ಕಡಿತಗೊಂಡ 9 ಜನರು ಹತ್ತಿಗೂಡುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದಾರೆ.

‘ಹುಚ್ಚ ನಾಯಿ ಕಡಿತಕ್ಕೆ ಒಳಗಾದ ಜನ, ಜಾನುವಾರುಗಳಿಗೆ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಸೂಕ್ತ ಪರಿಹಾರ ನೀಡಬೇಕು. ಅಲ್ಲದೇ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನೆ ಸಂಚಾಲಕ ಶರಣರೆಡ್ಡಿ ಹತ್ತಿಗೂಡುರ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT