ಯಾದಗಿರಿ: ‘ಹನ್ನೆರಡನೇ ಶತಮಾನದ ಶರಣರಲ್ಲಿ ಮಡಿವಾಳ ಮಾಚಿದೇವರು ನೇರನುಡಿಯ ವ್ಯಕ್ತಿತ್ವ ಹೊಂದಿದ್ದವರು’ ಎಂದು ತಹಶೀಲ್ದಾರ್ ಸುರೇಶ ಅಂಕಲಗಿ ಹೇಳಿದರು.

ನಗರದ ಸರ್ಕಾರಿ ಪದವಿ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿವಾಳ ಮಾಚಿದೇವ ಜಯಂತ್ಯುತ್ಸವ ಸಮಿತಿ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

‘ಇಂದಿನ ಸಮಾಜಕ್ಕೆ ಶರಣರ ಆದರ್ಶಗಳು, ತತ್ವಗಳು ಹಾಗೂ ವಚನಗಳು ಅಗತ್ಯವಿದೆ. ಶರಣರು ತೋರಿದ ಮಾರ್ಗದಲ್ಲಿ ಪ್ರತಿಯೊಬ್ಬರು ಜೀವನ ನಡೆಸಬೇಕಿದೆ’ ಎಂದರು.

‘ಜಗಜ್ಯೋತಿ ಬಸವಣ್ಣನವರ ಅನುಭವ ಮಂಟಪದಲ್ಲಿನ ಶರಣರಲ್ಲಿ ಮಡಿವಾಳ ಮಾಚಿದೇವರು ಬಹಳಷ್ಟು ಪ್ರಾಮುಖ್ಯತೆ ಪಡೆದಿದ್ದರು. ಮಡಿವಾಳ ಮಾಚಿದೇವರ ಆದರ್ಶಗಳನ್ನು ಪಾಲಿಸುವುದರೊಂದಿಗೆ ಸಮಾಜದವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಪ್ರಗತಿಗೆ ಸಹಕರಿಸಬೇಕು’ ಎಂದು ಹೇಳಿದರು.

ಮಲ್ಲಿಕಾ ಕಾಲೇಜಿನ ಕನ್ನಡ ಉಪನ್ಯಾಸಕಿ ಮಹಿಮುನ್ನಿ ಅವರು ಉಪನ್ಯಾಸ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಕಾಡ್ಲೂರ್, ಸಮಾಜದ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಬಿಜಾಸಪುರ, ಮುಖಂಡ ಶ್ರೀಶೈಲ ಮಡಿವಾಳ ಸೇರಿ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.